Job Alert : ಭಾರತೀಯ ನೌಕಾಪಡೆಯ ಅಗ್ನಿವೀರ್ ನೇಮಕಾತಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Job Alert : ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಕನಸು ಕಾಣುತ್ತಿರುವ ಯುವಕರಿಗೆ ಸುವರ್ಣಾವಕಾಶ ದೊರೆತಿದೆ. ಭಾರತೀಯ ನೌಕಾಪಡೆಯು ಅಗ್ನಿವೀರ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಈಗಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾಪಡೆಯ ಅಗ್ನಿವೀರ್ ಅಪ್ರೆಂಟಿಸ್ ನೇಮಕಾತಿ 01/2027 ಮತ್ತು 02/2027 ಬ್ಯಾಚ್ಗಳಿಗಾಗಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 29ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

SSLC ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಜೊತೆಗೆ AICTE ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಮೂರು ವರ್ಷದ ಡಿಪ್ಲೊಮಾ ಪದವಿಯನ್ನು ಕನಿಷ್ಠ ಶೇ.50 ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ವೈದ್ಯಕೀಯ ಪರೀಕ್ಷೆ ಮೂಲಕ ಅಂತಿಮ ಆಯ್ಕೆ
ಬ್ಯಾಚ್ 01/2027ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1, 2004ರಿಂದ ಮೇ 31, 2009ರೊಳಗೆ ಜನಿಸಿರಬೇಕು. ಬ್ಯಾಚ್ 02/2027 ಅಭ್ಯರ್ಥಿಗಳು ಮೇ 1, 2005ರಿಂದ ಅಕ್ಟೋಬರ್ 31, 2009ರೊಳಗೆ ಜನಿಸಿರಬೇಕು.
ನೇಮಕಾತಿ ಪ್ರಕ್ರಿಯೆಯಲ್ಲಿ ಮೊದಲ ಹಂತವಾಗಿ ಭಾರತೀಯ ನೌಕಾಪಡೆಯ ಪ್ರವೇಶ ಪರೀಕ್ಷೆ ಅಂದರೆ INET ನಡೆಸಲಾಗುತ್ತದೆ.
ನಂತರ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ.
ಇದನ್ನು ಓದಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಸರಳ ವಿಧಾನ:
ಇನ್ನು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.
ಬಳಿಕ ಅಗ್ನಿವೀರ್ ಅಪ್ರೆಂಟಿಸ್ INET 2/2026 ಲಿಂಕ್ ಮೂಲಕ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಶುಲ್ಕ ಪಾವತಿಸಬೇಕು.
ಈ ನೇಮಕಾತಿಗೆ 550 ರೂಪಾಯಿ ಅರ್ಜಿ ಶುಲ್ಕ ಹಾಗೂ ಶೇಕಡಾ 18ರಷ್ಟು ಜಿಎಸ್ಟಿ ಪಾವತಿಸಬೇಕಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರಿಂಟ್ಔಟ್ ಅಥವಾ ಪಿಡಿಎಫ್ ಪ್ರತಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಕಾಯ್ದಿರಿಸಿಕೊಳ್ಳುವಂತೆ ಸೂಚಿಸಲಾಗಿದೆ.

ದೇಶಸೇವೆಗೆ ಸುವರ್ಣವಕಾಶ
ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ನೌಕಾಪಡೆ ತಿಳಿಸಿದೆ.
ಭಾರತೀಯ ನೌಕಾಪಡೆಯ ಅಗ್ನಿವೀರ್ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಎಸ್ಎಸ್ಎಲ್ಸಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಯುವಕರು ಜೂನ್ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ನೋಡಿ : ತುಮಕೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜನರೊಂದಿಗೆ ಸೋಮಣ್ಣ ಯೋಗಾಭ್ಯಾಸ ಮಾಡಿದ್ರು




