Job Alert : ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕರ್ನಾಟಕ ಅರಣ್ಯ ಇಲಾಖೆಯ ವಿವಿಧ ವೃತ್ತಗಳಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ (Forest Watcher) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅನುಮೋದನೆ ನೀಡಿದೆ.
ನೇರ ನೇಮಕಾತಿಗೆ ಕರಡು ಅಧಿಸೂಚನೆ ಸಿದ್ಧ
ಅರಣ್ಯ ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಕರಡು ಅಧಿಸೂಚನೆಯನ್ನು ಸಿದ್ಧಪಡಿಸಿದ್ದು, ಆರ್ಥಿಕ ಇಲಾಖೆಯ ಸಹಮತಿಯೂ ದೊರೆತಿದೆ. ಜುಲೈ 20ರಂದು ಅಧಿಕೃತ ಅಧಿಸೂಚನೆ ಪ್ರಕಟಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಮುಖ ದಿನಾಂಕಗಳು
- ಅಧಿಕೃತ ಅಧಿಸೂಚನೆ: ಜುಲೈ 20, 2026
- ಆನ್ಲೈನ್ ಅರ್ಜಿ ಆರಂಭ: ಆಗಸ್ಟ್ 1, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 31, 2026
- ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 2, 2026
ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಹುದ್ದೆಗಳ ವಿವರ
- ಒಟ್ಟು ಹುದ್ದೆಗಳು: 750
- ಉಳಿಕೆ ಮೂಲ ವೃಂದ: 700
- ಕಲ್ಯಾಣ ಕರ್ನಾಟಕ ವೃಂದ: 50
ವಿದ್ಯಾರ್ಹತೆ
ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಅಧಿಸೂಚನೆ ಪ್ರಕಟವಾಗುವ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಯ ವಿಶೇಷ ಕ್ರಮವಾಗಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
- ಸಾಮಾನ್ಯ, 2A, 2B, 3A, 3B: 30 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1: 32 ವರ್ಷ
- ಮಾಜಿ ಸೈನಿಕರು: 33 ವರ್ಷ
ಇದನ್ನು ಓದಿ : ರೈಲ್ವೆ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ – RRB ಯಲ್ಲಿ 119 ಹುದ್ದೆಗಳ ಭರ್ತಿ

ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳು – ₹200
- ಮಹಿಳೆ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು – ₹100
- ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ಪುರುಷ ಅಭ್ಯರ್ಥಿಗಳು – ₹100
- ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ಮಹಿಳೆ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು – ₹50
- ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ಇದೆ.
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ₹27,500 ರಿಂದ ₹46,675 ವೇತನ ಶ್ರೇಣಿ ದೊರೆಯಲಿದೆ.
ಆಯ್ಕೆ ಪ್ರಕ್ರಿಯೆ
ಆನ್ಲೈನ್ನಲ್ಲಿ ಸಲ್ಲಿಸಲಾದ ಅರ್ಜಿಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ಅಂಕಗಳನ್ನು ಪರಿಗಣಿಸಿ 1:20 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ **ದೈಹಿಕ ಮಾನದಂಡ ಪರೀಕ್ಷೆ (PST), ದೈಹಿಕ ತಾಳ್ವಿಕೆ ಪರೀಕ್ಷೆ (PET) ಹಾಗೂ ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ (Physical Efficiency Test)**ಗೆ ಆಹ್ವಾನಿಸಲಾಗುತ್ತದೆ.
ಈ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಎಸ್ಎಸ್ಎಲ್ಸಿ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, ದಾಖಲೆ ಪರಿಶೀಲನೆಯ ಬಳಿಕ 1:1 ಅನುಪಾತದಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಎಲ್ಲ ಮಾಹಿತಿ ಹಾಗೂ ಮುಂದಿನ ಪ್ರಕಟಣೆಗಳನ್ನು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು.

ಇದನ್ನು ನೋಡಿ : ತುಮಕೂರು ಪೊಲೀಸರ ಭರ್ಜರಿ ಬೇಟೆ..! – 4 ಲಕ್ಷಕ್ಕೂ ಅಧಿಕ ಮೌಲ್ಯದ GANJA SEIZE




