Job Alert : 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆ ಅನುಮೋದನೆ; ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಅಸ್ತು!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದೆ
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ಕೆಲವು ಬೋಧನಾ ಹುದ್ದೆಗಳ ನೇಮಕಾತಿ ನಿಯಮ–2026ರ ಕರಡು ಅಧಿಸೂಚನೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಇದರೊಂದಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದನ್ನು ಓದಿ : 100 ದಿನಗಳಲ್ಲಿ 15,000 ಶಿಕ್ಷಕರ ನೇಮಕಾತಿ – ಸರ್ಕಾರ ಅನುಮೋದನೆ

ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು
- ಸರ್ಕಾರಿ ಶಾಲೆಗಳಿಗೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ.
- ಬೆಂಗಳೂರಿನ ಲೋಕಭವನ ಆವರಣದಲ್ಲಿ ರಾಜ್ಯಪಾಲರ ಆಡಳಿತ ಕಚೇರಿ, ವಿಶೇಷ ಕಾರ್ಯದರ್ಶಿಗಳ ವಸತಿ ಗೃಹ ಹಾಗೂ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ₹27 ಕೋಟಿ ಮಂಜೂರು.
- ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳಿಗೆ ₹10 ಲಕ್ಷ ಘಟಕ ವೆಚ್ಚದಲ್ಲಿ 380 ಚದರ ಅಡಿ ಮನೆಗಳ ನಿರ್ಮಾಣಕ್ಕೆ ನಿರ್ಧಾರ.
- ರಾಯಚೂರು IIITನಲ್ಲಿ ಕೃತಕ ಬುದ್ಧಿಮತ್ತೆ (AI) ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ಐದು ವರ್ಷಗಳಲ್ಲಿ ₹12 ಕೋಟಿ ಅನುದಾನ.
- ಬೆಂಗಳೂರಿನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ₹83.50 ಕೋಟಿ ಅನುಮೋದನೆ.
- ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ SH-156 ಹಾಗೂ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಮಂಜೂರು.
- ನಂಜನಗೂಡಿನಲ್ಲಿ ಕಪಿಲಾ ನದಿಗೆ ಮಲಿನ ನೀರು ಸೇರುವುದನ್ನು ತಡೆದು ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ₹70 ಕೋಟಿ ಆಡಳಿತಾತ್ಮಕ ಅನುಮೋದನೆ.
- ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ 116 ಕೆರೆಗಳು ಹಾಗೂ ಗಾಯತ್ರಿ ಜಲಾಶಯ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಯೋಜನೆಗೆ ₹244 ಕೋಟಿ ಅನುಮೋದನೆ.
- ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರನ್ನು ಅಮಾನತುಗೊಳಿಸಿರುವ ರಾಜ್ಯಪಾಲರ ಆದೇಶಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಉಪಸ್ಥಿತರಿದ್ದರು.

ಇದನ್ನು ನೋಡಿ : ಕುಣಿಗಲ್ ಬಳಿಯ ಕಲ್ಲು ಕ್ವಾರಿಯಲ್ಲಿ ದುರಂತ ಲಾರಿ ಉರುಳಿ ಇಬ್ಬರು ಸ್ಥಳದಲ್ಲೇ ಸಾ*




