ISRO ದಿಂದ 242 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಒದಗಿಬಂದಿದೆ. ಸಂಸ್ಥೆಯು ವಿವಿಧ ಆಡಳಿತಾತ್ಮಕ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕೃತ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಭಾರತೀಯ ನಾಗರಿಕರಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 242 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಹುದ್ದೆಗಳ ವಿವರ
- ಅಸಿಸ್ಟೆಂಟ್ (Assistant): 120 ಹುದ್ದೆಗಳು
- ಅಪ್ಪರ್ ಡಿವಿಷನ್ ಕ್ಲರ್ಕ್ (UDC): 76 ಹುದ್ದೆಗಳು
- ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (JPA): 22 ಹುದ್ದೆಗಳು
- ಸ್ಟೆನೋಗ್ರಾಫರ್ (Stenographer): 24 ಹುದ್ದೆಗಳು

ಶೈಕ್ಷಣಿಕ ಅರ್ಹತೆ
ಅಸಿಸ್ಟೆಂಟ್ ಮತ್ತು UDC ಹುದ್ದೆಗಳಿಗೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ
- ಕಂಪ್ಯೂಟರ್ ಜ್ಞಾನ ಅಗತ್ಯ
JPA ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ:
- ಪದವಿ ಅರ್ಹತೆ
- ನಿಮಿಷಕ್ಕೆ 60 ಪದಗಳ ಇಂಗ್ಲಿಷ್ ಸ್ಟೆನೋಗ್ರಫಿ ವೇಗ
ಇದನ್ನು ಓದಿ : ಇಸ್ರೋದಲ್ಲಿ ಬಂಪರ್ ನೇಮಕಾತಿ – ಅರ್ಹತೆ, ವೇತನ ಮತ್ತು ಅರ್ಜಿ ವಿವರ ಇಲ್ಲಿದೆ

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷಗಳು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ಅನ್ವಯವಾಗಲಿದೆ.
ವೇತನ ಮತ್ತು ಸೌಲಭ್ಯಗಳು
ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ (7th CPC) ನಿಯಮಗಳ ಪ್ರಕಾರ ಲೆವೆಲ್-4 ವೇತನ ಶ್ರೇಣಿ ನೀಡಲಾಗುತ್ತದೆ.
- ಆರಂಭಿಕ ಮೂಲ ವೇತನ: ₹25,500
- ಇದರೊಂದಿಗೆ ತುಟ್ಟಿಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA) ಸೇರಿದಂತೆ ಕೇಂದ್ರ ಸರ್ಕಾರದ ಇತರೆ ಸೌಲಭ್ಯಗಳು ದೊರೆಯಲಿವೆ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಾಲ್ಕು ಹಂತಗಳಲ್ಲಿ ನಡೆಯಲಿದೆ:
- ಲಿಖಿತ ಪರೀಕ್ಷೆ
- ಟೈಪಿಂಗ್ / ಸ್ಟೆನೋಗ್ರಫಿ ಕೌಶಲ್ಯ ಪರೀಕ್ಷೆ
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ತಪಾಸಣೆ
ಅಂತಿಮವಾಗಿ ಅರ್ಹತೆ ಮತ್ತು ಪರೀಕ್ಷಾ ಫಲಿತಾಂಶದ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 16 ಆಗಿದೆ. ಅಭ್ಯರ್ಥಿಗಳು ISRO ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನು ನೋಡಿ : ಸಿನಿಮಾ ಸ್ಟೈಲಲ್ಲಿ ದರೋಡೆಗೆ ಯತ್ನ – ಚಿನ್ನದಂಗಡಿ ಮಾಲೀಕನ ಮೇಲೆ FIRING




