Jobs Alert : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 1,421 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Jobs Alert : ರಾಜ್ಯದ ಯುವಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಅವಕಾಶ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ಒಟ್ಟು 1,421 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಪುರುಷ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಹುದ್ದೆಗಳ ವಿವರ
- ಹುದ್ದೆಯ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR – ಪುರುಷ)
- ಒಟ್ಟು ಹುದ್ದೆಗಳು: 1,421
- ವೇತನ ಶ್ರೇಣಿ: ₹37,500 – ₹76,100
ಅರ್ಜಿ ಸಲ್ಲಿಕೆ ದಿನಾಂಕಗಳು
- ಅರ್ಜಿ ಆರಂಭ: 22 ಜೂನ್ 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜುಲೈ 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24 ಜುಲೈ 2026

ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಪಿಯುಸಿ (PUC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. CBSE, ICSE, NIOS 12ನೇ ತರಗತಿ ಹಾಗೂ ಮೂರು ವರ್ಷದ ಡಿಪ್ಲೊಮಾ ವಿದ್ಯಾರ್ಹತೆಯನ್ನು ಸಹ ಪರಿಗಣಿಸಲಾಗುತ್ತದೆ.
ವಯೋಮಿತಿ
- ಸಾಮಾನ್ಯ ವರ್ಗ (GM): 33 ವರ್ಷ
- SC/ST/OBC ಅಭ್ಯರ್ಥಿಗಳು: 35 ವರ್ಷ
- ಬುಡಕಟ್ಟು ಅಭ್ಯರ್ಥಿಗಳು: 38 ವರ್ಷ
ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು.

ಅರ್ಜಿ ಶುಲ್ಕ
- GM/OBC (2A, 2B, 3A, 3B): ₹750
- SC/ST, ಪ್ರವರ್ಗ-1 ಹಾಗೂ ಮಾಜಿ ಸೈನಿಕರು: ₹500
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಆಧಾರದ ಮೇಲೆ ನಡೆಯಲಿದೆ:
ಲಿಖಿತ ಪರೀಕ್ಷೆ
- ದಿನಾಂಕ: 06 ಸೆಪ್ಟೆಂಬರ್ 2026
- ಸಮಯ: ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00
- ಒಟ್ಟು ಅಂಕಗಳು: 100
- ನೆಗೆಟಿವ್ ಮಾರ್ಕಿಂಗ್: ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತ

PST ಮತ್ತು PET ಪರೀಕ್ಷೆ
ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುತ್ತದೆ. 1600 ಮೀಟರ್ ಓಟ, ಉದ್ದ ಜಿಗಿತ/ಎತ್ತರ ಜಿಗಿತ ಹಾಗೂ ಗುಂಡು ಎಸೆತ ಸ್ಪರ್ಧೆಗಳು ಪರೀಕ್ಷೆಯ ಭಾಗವಾಗಿರುತ್ತವೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.




