
Job Alert : ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ; ಪ್ರಮುಖ ದಿನಾಂಕಗಳ ವಿವರ ಇಲ್ಲಿದೆ!
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಶಾಲಾ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಅರ್ಹ ಅಭ್ಯರ್ಥಿಗಳು ಪರಿಷ್ಕೃತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆ ತಿಳಿಸಿದೆ.
ಯಾವ ಹುದ್ದೆಗಳಿಗೆ ನೇಮಕಾತಿ?
ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಸಾಮಾನ್ಯ ಶಿಕ್ಷಕ (PST – 1ರಿಂದ 5ನೇ ತರಗತಿ), ಪಿಇ ಗ್ರೇಡ್-2 (1ರಿಂದ 8ನೇ ತರಗತಿ), GPT (6ರಿಂದ 8ನೇ ತರಗತಿ), CST (1ರಿಂದ 8ನೇ ತರಗತಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಜೊತೆಗೆ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಸಹಶಿಕ್ಷಕರ ವೃಂದ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಗಳಿಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
READ THIS : ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ – ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅ.26ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಶಿಕ್ಷಣ ಇಲಾಖೆಯು ಈಗಾಗಲೇ ಜಿಲ್ಲಾವಾರು ಅಧಿಸೂಚನೆಗಳನ್ನು ಪ್ರಕಟಿಸಿದ್ದು, ಈ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಆನ್ಲೈನ್ ಅರ್ಜಿ ಸಲ್ಲಿಸಲು ಅಕ್ಟೋಬರ್ 26ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿಗೆ ಸಂಬಂಧಿಸಿದ ಶುಲ್ಕ ಪಾವತಿ ಮಾಡಿರುವುದನ್ನು ಖಚಿತಪಡಿಸಿಕೊಳ್ಳಲು ಅಕ್ಟೋಬರ್ 28ರವರೆಗೆ ಅವಕಾಶ ಕಲ್ಪಿಸಲಾಗಿದೆ.
Job Alert – ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಪರೀಕ್ಷೆ
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಪರೀಕ್ಷೆಯ ನಿಖರ ದಿನಾಂಕ, ಸಮಯ ಹಾಗೂ ಸಂಪೂರ್ಣ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.

MUST WATCH : ಉದ್ಯಮಕ್ಕೆ ಗಡಿಭಾಗದಲ್ಲಿ ಹೊಸ ನಾಂದಿ – ಯುವಕರ ಉದ್ಯಮಕ್ಕೆ KN ರಾಜಣ್ಣ ಸಾಥ್




