CSIR-NAL Recruitment : ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್ನಲ್ಲಿ ಉದ್ಯೋಗವಕಾಶ

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶ ದೊರಕಿದೆ. ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಸಿಎಸ್ಐಆರ್-ಎನ್ಎಎಲ್ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ನಡೆಸಲು ಮುಂದಾಗಿದೆ. ಈ ಕುರಿತು ಒಂದು ವರದಿ.
ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ
ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರೀಯಲ್ ರಿಸರ್ಚ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳಾದ CSIR-NAL ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಪ್ರಕಟಣೆ ಸಂಖ್ಯೆ 12/2026/PS ಅಡಿಯಲ್ಲಿ ವಿವಿಧ ‘ಪ್ರಾಜೆಕ್ಟ್ ಸ್ಟಾಫ್’ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನು ಓದಿ : RBI ನಲ್ಲಿ ಯುವ ವೃತ್ತಿಪರರ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ!
ಈ ನೇಮಕಾತಿಗಾಗಿ ಬೆಂಗಳೂರಿನ ಹೆಚ್.ಎ.ಎಲ್ ಏರ್ಪೋರ್ಟ್ ರಸ್ತೆಯ ಕೊಡಿಹಳ್ಳಿಯಲ್ಲಿರುವ CSIR-NAL ಕ್ಯಾಂಪಸ್ನಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಅನುಭವಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಾಗಿದೆ.
ಸಂದರ್ಶನದ ದಿನಾಂಕಗಳು
- ಜೂನ್ 19
- ಜೂನ್ 22
- ಜೂನ್ 24
- ಜೂನ್ 29
ಸಂಸ್ಥೆಯ ವಿವಿಧ ಸಂಶೋಧನಾ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಸಿಬ್ಬಂದಿಯನ್ನು ಈ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಹುದ್ದೆಗೆ ಅನುಗುಣವಾಗಿ ನಿಗದಿತ ದಿನಗಳಲ್ಲಿ ಸಂದರ್ಶನ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ಗೆ ಭೇಟಿ ನೀಡಿ
ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಹಾಗೂ ಇತರೆ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವಂತೆ ಆಡಳಿತ ವಿಭಾಗ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು CSIR-NAL ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಂಪೂರ್ಣ ಅಧಿಸೂಚನೆಯನ್ನು ಪರಿಶೀಲಿಸಬಹುದಾಗಿದೆ.
ಇದನ್ನು ನೋಡಿ : ತುಮಕೂರಿನಲ್ಲಿ ಮೋಡ ಕವಿದ ವಾತಾವರಣ – ವರುಣ ದೇವ ಜಿಲ್ಲೆ ಮೇಲೆ ಕೃಪೆ ತೋರ್ತಾನಾ?




