ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ – BJP ಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಆಕ್ರಮಣಕಾರಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ
ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಅಣ್ಣಾಮಲೈ ಅವರು BJP ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ.

Annamalai ಮುಂದಿನ ನಿರ್ಧಾರವೇನು?
ಈ ಮೂಲಕ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಈ ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.
ಇದನ್ನು ಓದಿ : ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಲು ಮುಂದಾದ್ರ ಅಣ್ಣಾಮಲೈ?

ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು?
ಮಾಜಿ ಐಪಿಎಸ್ ಅಧಿಕಾರಿ Annamalai ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ರಾಜಕೀಯ ವಲಯದಲ್ಲಿ ಅವರ ಈ ನಿರ್ಧಾರಕ್ಕೆ ಹಲವು ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ.

ಇದನ್ನು ನೋಡಿ : ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಮುಂದಿನ 3 ದಿನ ಭಾರೀ ಮಳೆ ಅಬ್ಬರ.!




