Kalburgi : ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್

Kalburgi ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರುವ ಘಟನೆ ನಡೆದಿದ್ದು, ಆತಂಕ ಸೃಷ್ಟಿಸಿದೆ. ನಸುಕಿನ ಜಾವ ಸುಮಾರು 3 ಗಂಟೆಯ ವೇಳೆಗೆ ಜೈಲಿನ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ಎತ್ತರದ ಕಾಂಪೌಂಡ್ ಗೋಡೆ ಹಾರಿ ಮೂವರು ಕೈದಿಗಳು ಎಸ್ಕೇಪ್ ಆಗಿದ್ದಾರೆ.
ಇದನ್ನು ಓದಿ : Parappana Agrahara ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಕಾರ್ಡ್ ಪತ್ತೆ!

ಜೈಲಿನಿಂದ ಮೂವರು ಕೈದಿಗಳು ಪರಾರಿ!
ಮಸ್ತಾನ್, ಸಂತೋಷ್ ಮತ್ತು ಸಾಗರ್ ಜೈಲಿನಿಂದ ಎಸ್ಕೇಪ್ ಆದ ಕೈದಿಗಳು ಎಂದು ಗುರುತಿಸಲಾಗಿದೆ. ಮೂವರು ಕೈದಿಗಳು ಇಂದು ನಸುಕಿನ ಜಾವ ಸುಮಾರು 3 ಗಂಟೆಯ ವೇಳೆಗೆ ಜೈಲಿನ ಕಾಪೌಂಡ್ ಹಾರಿ ಪರಾರಿಯಾಗಿದ್ದಾರೆ. ಬೀದರ್ನಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ನ್ಯಾಯಾಲಯ ಇವರಿಗೆ ಶಿಕ್ಷೆ ವಿಧಿಸಿತ್ತು. ಬಳಿಕ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಜಾ ಅನುಭವಿಸುತ್ತಿದ್ದರು.

Kalburgi – ಪರಾರಿಯಾಗಿರುವ ಕೈದಿಗಳ ಪತ್ತೆಗಾಗಿ ಜಾಲ ಬೀಸಿರುವ ಪೊಲೀಸರು
ಕೈದಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದ ತಕ್ಷಣ ಜೈಲು ಅಧಿಕಾರಿಗಳು ಎಚ್ಚೆತ್ತುಕೊಂಡು ಫರತಹಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಕೈದಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಇದನ್ನು ನೋಡಿ : TUMAKURU VV ದೇಶದಲ್ಲೇ ಮಾದರಿಯಾಗಿದೆ – ವಿವಿಯನ್ನು ಕೊಂಡಾಡಿದ ರಾಜ್ಯಪಾಲರಾದ ಗೆಹ್ಲೋಟ್





