Kamal Haasan ಕನ್ನಡ ಹೇಳಿಕೆ ವಿವಾದ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ

ಕನ್ನಡ ಭಾಷೆ ಕುರಿತು ನಟ ಕಮಲ್ ಹಾಸನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣವನ್ನು ಇದೀಗ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಎಸಿಜೆಎಂ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಖಾಸಗಿ ದೂರು ದಾಖಲು
2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, “ತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿ” ಎಂಬ ಅರ್ಥದಲ್ಲಿ ನೀಡಿದ್ದ ಹೇಳಿಕೆ ಕರ್ನಾಟಕದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ವಿರೋಧಿಸಿ ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ಮುಂದುವರಿದಿತ್ತು.
ಇದನ್ನು ಓದಿ : ರೇಣುಕಾಸ್ವಾಮಿ ಪ್ರಕರಣದ ಸಾಕ್ಷಿಗೆ ಬೆದರಿಕೆ ಕೇಸ್ – ಪುನೀತ್ ಮತ್ತೆ ಪೊಲೀಸ್ ಕಸ್ಟಡಿಗೆ

Kamal Haasan ಕನ್ನಡ ಹೇಳಿಕೆ ವಿವಾದ – ವಿಶೇಷ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ
ಇದೀಗ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಕಾನೂನು ಪ್ರಕ್ರಿಯೆಯಂತೆ ಪ್ರಕರಣವನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ (ಎಸಿಜೆಎಂ) ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಇನ್ನು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.

ಇದನ್ನು ನೋಡಿ : ಕೆಸರುಮಡುವಿನಲ್ಲಿ ಜಾತ್ರೆಗೆ ಭರ್ಜರಿ ತಯಾರಿ – ಜಾತ್ರೆಗೂ ಮುನ್ನ ದೇವಿಯರಿಗೆ ವಿಶೇಷ ಪೂಜೆ




