ಕರ್ನಾಟಕ ಬಂದ್ ವಾಪಸ್ – ಹೋರಾಟಗಾರರಿಗೆ ಧನ್ಯವಾದಗಳು ತಿಳಿಸಿದ CM

ರಾಜ್ಯದ ಜನರ ಹಿತರಕ್ಷಣೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಕರೆ ನೀಡಲಾಗಿದ್ದ ರಾಜ್ಯಾದ್ಯಂತ ಬಂದ್ ನಿರ್ಧಾರವನ್ನು ವಾಪಸ್ ಪಡೆದ ಕನ್ನಡಪರ ಹಾಗೂ ರೈತ ಸಂಘಟನೆಗಳ ನಾಯಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧನ್ಯವಾದ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಡಿ.ಕೆ ಶಿವಕುಮಾರ್ ಹೇಳಿದ್ದೇನು?
ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳ ಪ್ರಮುಖ ಮುಖಂಡರು ತಮ್ಮನ್ನು ಖುದ್ದಾಗಿ ಭೇಟಿಯಾಗಿ ಬಂದ್ ಹಿಂಪಡೆಯುವ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿ : ರಾಜೀನಾಮೆ ನೀಡಲು ಬಂದರೆ ಅಂಗೀಕಾರ ಮಾಡುತ್ತೇನೆ – CM ಡಿಕೆಶಿ

ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿವೆ
ರಾಜ್ಯದ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ಕಾವೇರಿ ಸೇರಿದಂತೆ ವಿವಿಧ ಜಲಮೂಲಗಳ ಹಿತಾಸಕ್ತಿಗೆ ಸಂಬಂಧಿಸಿದಂತೆ ಸಂಘಟನೆಗಳು ಸರ್ಕಾರದ ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಇಟ್ಟಿವೆ. ಈ ಎಲ್ಲ ಬೇಡಿಕೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಹಾಗೂ ಸಕಾರಾತ್ಮಕವಾಗಿ ಪರಿಶೀಲಿಸಲಿದೆ ಎಂದು CM ಸ್ಪಷ್ಟಪಡಿಸಿದರು.
ಹೋರಾಟಗಾರರಿಗೆ ಧನ್ಯವಾದಗಳು ತಿಳಿಸಿದ CM
ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಘಟನೆಗಳು ಪ್ರದರ್ಶಿಸಿದ ಈ ಜವಾಬ್ದಾರಿಯುತ ಸಹಕಾರಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಚರ್ಚೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.

ಇದನ್ನು ನೋಡಿ : ರೈತರ ಮಕ್ಕಳ ಸಾಧನೆಗೆ ಸನ್ಮಾನ – ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹ




