ಕಾವೇರಿ ಕಿಚ್ಚು – ಆಗಸ್ಟ್ 13 ರಂದು ಅಖಂಡ Karnataka Bandh

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್
ಇಂದು ಖಾಸಗಿ ಹೋಟೆಲ್ನಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಸಭೆ ನಡೆದ ಬಳಿಕ ಹೋರಾಟಗಾರ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದಾರೆ.
ಇದನ್ನು ಓದಿ : ನಾಳೆ ದೇಶಾದ್ಯಂತ ಬಂದ್ಗೆ ಕರೆ – ಶಾಲಾ ಕಾಲೇಜು, ಸಾರಿಗೆ ಏನೆಲ್ಲ ಇರಲ್ಲ?

ತುರ್ತು ಸಭೆ
ಕರ್ನಾಟಕದಲ್ಲಿ CWRC ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ರೈತರು ಹಾಗೂ ಕನ್ನಡ ಸಂಘಟನೆಗಳು ಹೋರಾಟಕ್ಕೆ ಇಳಿದಿದೆ. ಇದರ ನಡುವೆಯೇ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸದಸ್ಯರು ಭಾಗಿಯಾಗಲಿದ್ದಾರೆ.
ಇದನ್ನು ನೋಡಿ : ಅಪಾಯದ ಮಟ್ಟ ಮೀರಿ ಕೃಷ್ಣಾ ನದಿ ಹರಿವು – ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್..!





