CWRC & CWMA ಆದೇಶ ಖಂಡಿಸಿ ಇಂದು Karnataka Bandh – ತುಮಕೂರಲ್ಲಿ ಉರುಳು ಸೇವೆ ಮಾಡಿ ಆಕ್ರೋಶ

CWRC & CWMA ಆದೇಶ ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ತುಮಕೂರಿನಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಜನಜೀವನ ಆರಂಭವಾಗಿದ್ದು, ಬಸ್, ಆಟೋ ಹಾಗೂ ಖಾಸಗಿ ವಾಹನಗಳ ಸಂಚಾರ ಸಹಜವಾಗಿದೆ. ಅಂಗಡಿ-ಮುಂಗಟ್ಟುಗಳೂ ಎಂದಿನಂತೆ ತೆರೆದಿವೆ.

ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಆಗ್ರಹಿಸಿ ಕೆಲ ಕನ್ನಡಪರ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಆದರೆ ತುಮಕೂರಿನಲ್ಲಿ ಬಂದ್ ಬದಲು ಕನ್ನಡಪರ ಸಂಘಟನೆಗಳು ಸಾಂಕೇತಿಕ ಪ್ರತಿಭಟನೆ ನಡೆಸಿವೆ. ತುಮಕೂರು ಟೌನ್ಹಾಲ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ : ಎಂದಿನಂತೆ ಜನಜೀವನ – ಕರ್ನಾಟಕ ಬಂದ್ಗೆ ಸಿಗದ ಜನ ಬೆಂಬಲ

ತುಮಕೂರಲ್ಲಿ ಉರುಳು ಸೇವೆ ಮಾಡಿ ಆಕ್ರೋಶ
ಇನ್ನು ಟೌನ್ಹಾಲ್ ವೃತ್ತದಲ್ಲಿ ಉರುಳು ಸೇವೆ ನಡೆಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು, ಬಳಿಕ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತುಮಕೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ನೋಡಿ : ಕರ್ನಾಟಕ ಬಂದ್..ಬಂದ್ – ರಾಜ್ಯ ಸಂಪೂರ್ಣ ಸ್ಥಬ್ದ ಆಗುತ್ತಾ..? ಎಂದಿನಂತೆ ಇರುತ್ತಾ..?





