
Job Alert : ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ: ಜೈಲರ್, ವಾರ್ಡರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; 1.12 ಲಕ್ಷ ರೂ.ವರೆಗೆ ವೇತನ!
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶವೊಂದು ದೊರೆತಿದೆ. ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು 2026ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 293 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, SSLCಯಿಂದ ಪದವಿವರೆಗೆ ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಯಾವ ಹುದ್ದೆಗಳಿಗೆ ನೇಮಕಾತಿ?
ಪ್ರಸ್ತುತ ಪ್ರಕಟಿಸಿರುವ ನೇಮಕಾತಿಯಲ್ಲಿ ಒಟ್ಟು 293 ಹುದ್ದೆಗಳು ಒಳಗೊಂಡಿವೆ. ಹುದ್ದೆಗಳ ವಿವರ ಹೀಗಿದೆ:
ಜೈಲರ್ : 5 ಹುದ್ದೆಗಳು
ವಾರ್ಡರ್ : 275 ಹುದ್ದೆಗಳು
ದ್ವಿತೀಯ ದರ್ಜೆ ಬೋಧಕರು : 8 ಹುದ್ದೆಗಳು
ವಾರ್ಡರ್ ಕಮ್ ನರ್ಸಿಂಗ್: 5 ಹುದ್ದೆಗಳು
ಇಲಾಖೆಯಲ್ಲಿ ಒಟ್ಟಾರೆ 869 ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ 293 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ, ವಯೋಮಿತಿ
ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC ಅಥವಾ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 33 ವರ್ಷ ಎಂದು ನಿಗದಿಪಡಿಸಲಾಗಿದ್ದು, ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
READ THIS : ಕೆಇಎಯಿಂದ ಬರೋಬ್ಬರಿ 4,699 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ ಎಷ್ಟು?
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ರೂ.34,100ರಿಂದ ರೂ.1,12,900ರವರೆಗೆ ವೇತನ ದೊರೆಯಲಿದೆ.
ಜೈಲರ್: ರೂ.61,300–1,12,900ವಾರ್ಡರ್: ರೂ.37,500–76,100
ದ್ವಿತೀಯ ದರ್ಜೆ ಬೋಧಕರು: ರೂ.37,500–76,100
ವಾರ್ಡರ್ ಕಮ್ ನರ್ಸಿಂಗ್: ರೂ.34,100–67,600
ಅರ್ಜಿ ಶುಲ್ಕ
ಅಭ್ಯರ್ಥಿಗಳ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.750, ಪ್ರವರ್ಗ 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ ರೂ.75 ಶುಲ್ಕ ಇರಲಿದೆ. SC, ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500 ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಹೇಗೆ?
ಅಭ್ಯರ್ಥಿಗಳ ಆಯ್ಕೆಯು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಸೇರಿದಂತೆ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಆಯ್ಕೆ ಪ್ರಕ್ರಿಯೆಯ ಮೂಲಕ ನಡೆಯಲಿದೆ.
ಅರ್ಜಿ ಸಲ್ಲಿಕೆ ಯಾವಾಗ?
ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 19, 2026ರಿಂದ ಆರಂಭವಾಗಲಿದ್ದು, ಅಕ್ಟೋಬರ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ಹುದ್ದೆಯ ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಆಯ್ಕೆ ವಿಧಾನ ಹಾಗೂ ಇತರೆ ಷರತ್ತುಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸುವುದು ಅಗತ್ಯ.

MUST WATCH : ಹೊಸ PF ನಿಯಮಕ್ಕೆ ಸಿಡಿದೆದ್ದ ನೌಕರರು – ಪ್ರತಿಭಟನೆ ಕೈಬಿಡಿ ಎಂದ ಕಂಪನಿ,ಪೊಲೀಸರು




