Karnataka Weather : ಮೇ 3ರಿಂದ 9ರವರೆಗೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather : ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ (ಮೇ 3) ಮೇ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಯಾವ ಭಾಗಗಳಲ್ಲಿ ಮಳೆ?
ಹವಾಮಾನ ಇಲಾಖೆಯ ಪ್ರಕಾರ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ.
MUST READ : CSK vs MI : ಇದು ನಮ್ಮ ಸೀಸನ್ ಅಲ್ಲ – ದುಃಖಿತರಾದ ಹಾರ್ದಿಕ್ ಪಾಂಡ್ಯ..!!

ಕೆಲ ಜಿಲ್ಲೆಗಳಲ್ಲಿ ಒಣ ಹವಾಮಾನ
ಇದಕ್ಕೊಳಗಾಗಿ ಕೆಲವು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಒಣ ಹವಾಮಾನ ಇರಲಿದೆ:
- ಶಿವಮೊಗ್ಗ
- ಚಿಕ್ಕಮಗಳೂರು
- ಬಾಗಲಕೋಟೆ
- ಗದಗ
- ಹಾವೇರಿ
- ವಿಜಯಪುರ
- ಬೆಳಗಾವಿ
- ಬೀದರ್
- ಧಾರವಾಡ

ಮೇ 5ರಿಂದ ಮಳೆ ವಾಪಸ್ಸು
ಮೇ 5ರಿಂದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ:
➡️ ಕೊಪ್ಪಳ
➡️ ಯಾದಗಿರಿ
➡️ ರಾಯಚೂರು
➡️ ಕಲಬುರಗಿ
MUST WATCH : ಸಿದ್ಧಗಂಗಾ ಮಠಕ್ಕೆ VIJAYENDRA VISIT – BSY ಅಭಿಮಾನೋತ್ಸವಕ್ಕೆ ಭರ್ಜರಿ ಸಿದ್ಧತೆ..!




