Karnataka Weather : ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather : ಕರ್ನಾಟಕ ರಾಜ್ಯಾದ್ಯಂತ ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿಗೆ ಆರೆಂಜ್ ಅಲರ್ಟ್
ಇಂದು ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ಇಲಾಖೆ ತಿಳಿಸಿದೆ.
MUST READ : Gold & Silver Rate : ಚಿನ್ನದ ಬೆಲೆ ಬೆಳ್ಳಿ ಬೆಲೆಯಲ್ಲಿ ಏರಿಕೆ..!!

ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಿಲ್ಲೆಗಳು
ಇಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್.
ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ದಿನಗಳ ಮುನ್ಸೂಚನೆ
ಮೇ 22:
ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಮೇ 23:
ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
MUST WATCH : ಭೂ ಸ್ವಾಧೀನ ವಿರೋಧಿಸಿ ರೈತರು ಪ್ರೊಟೆಸ್ಟ್ ಜೂನ್ 5ಕ್ಕೆ ವಿಧಾನಸೌಧ ಮುತ್ತಿಗೆಗೆ ಕರೆ




