Karnataka Weather : ಬೆಂಗಳೂರು ನಗರದ ಹಲವೆಡೆ ಮಳೆ ಆರಂಭವಾಗಿದ್ದು, ಮುಂದಿನ ಮೂರು ಗಂಟೆಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather : ನಗರದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮುಂದಿನ ಮೂರು ಗಂಟೆಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮೋಡ ಕವಿದ ವಾತಾವರಣ
ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ನಗರದ ಹಲವೆಡೆ ಸಂಪೂರ್ಣ ಕತ್ತಲು ಆವರಿಸಿದೆ. ಮಳೆಗಾಲದ ವಾತಾವರಣದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
MUST READ : ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಹರಿಬಿಟ್ಟ ಮೂವರು ಅರೆಸ್ಟ್!

ಹಲವೆಡೆ ಆರಂಭವಾದ ಮಳೆ
ಈಗಾಗಲೇ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪೋರೇಷನ್ ಸುತ್ತಮುತ್ತ ಮಳೆ ಆರಂಭವಾಗಿದ್ದು, ಪ್ಯಾಲೆಸ್ ಗ್ರೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 3 ಗಂಟೆ ಎಚ್ಚರಿಕೆ
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಲವಾದ ಗಾಳಿಯೂ ಬೀಸುವ ನಿರೀಕ್ಷೆಯಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ
ಭಾರೀ ಮಳೆಯ ಹಿನ್ನೆಲೆಯಲ್ಲಿ ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸುವುದು, ವಾಹನ ಚಾಲಕರು ನಿಧಾನವಾಗಿ ಸಂಚರಿಸುವುದು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
MUST WATCH : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಚಿಕಿತ್ಸೆಗಾಗಿ ಬಡ ರೋಗಿಗಳ ಪರದಾಟ | SIRA NEWS |




