Karnataka Weather : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜು.3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Karnataka Weather : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಶುಕ್ರವಾರ (ಜು.3) ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ..

ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ
ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಹೊರಡಿಸಿರುವ ಆದೇಶದಂತೆ, ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಎಲ್ಲಾ ಶಿಕ್ಷಣ ಸಂಸ್ಥೆಗಳು ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
MUST READ : Dina Bhavishaya : ಇಂದು ಕೃಷ್ಣ ಪಿಂಗಳ ಸಂಕಷ್ಟ ಚತುರ್ಥಿ, ಈ ರಾಶಿಗೆ ಮಹಾಲಕ್ಷ್ಮಿ ಅನುಗ್ರಹ..!
ಇದಲ್ಲದೆ, ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಿಗೆ ಎಚ್ಚರಿಕೆ
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಅಗತ್ಯವಿದ್ದಾಗ ಮಾತ್ರ ಹೊರಗಡೆ ಸಂಚರಿಸಬೇಕು. ವಿಶೇಷವಾಗಿ ನದಿ, ಹೊಳೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ತೆರಳುವುದನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
MUST WATCH : ವಾಸದ ಮನೆಗಳನ್ನೇ ಧ್ವಂಸ ಮಾಡಿದ ಕಿರಾತಕರು ಹಳೆ ದ್ವೇಷಕ್ಕೆ ಜೆಸಿಬಿಯಿಂದ ಮೂರು ಮನೆಗಳ ಧ್ವಂಸ | HASSAN NEWS |




