Sandur ರಾಜವಂಶದ ಕಾರ್ತಿಕೇಯ ಘೋರ್ಪಡೆ ಅವರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಸಚಿವ ಎಂ.ವೈ. ಘೋರ್ಪಡೆ ಅವರ ಪುತ್ರರಾಗಿದ್ದ ಅವರು ಬಿಜೆಪಿ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದರು.

ಬಳ್ಳಾರಿ ಜಿಲ್ಲೆಯ Sandur ರಾಜವಂಶದ ಸದಸ್ಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕಾರ್ತಿಕೇಯ ಘೋರ್ಪಡೆ (Kartikeya Ghorpade) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಸಂಡೂರು ಹಾಗೂ ಬಳ್ಳಾರಿ ಜಿಲ್ಲೆಯ ಜನರಲ್ಲಿ ತೀವ್ರ ಸಂತಾಪ ಮೂಡಿಸಿದೆ.
ಮಾಹಿತಿಯ ಪ್ರಕಾರ, ಕಾರ್ತಿಕೇಯ ಘೋರ್ಪಡೆ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಸುಮಾರು 6 ಗಂಟೆ ವೇಳೆಗೆ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ದುಃಖದಲ್ಲಿ ಮುಳುಗಿದ್ದಾರೆ.
MUST READ : ಜಿಯೋಹಾಟ್ಸ್ಟಾರ್ನಲ್ಲಿ ‘ Dhurandhar 2 ’ ಹೊಸ ದಾಖಲೆ..!!
ಮಾಜಿ ಸಚಿವ ಎಂ.ವೈ. ಘೋರ್ಪಡೆ ಅವರ ಪುತ್ರ
ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ರಾಜ ಹಾಗೂ ಮಾಜಿ ಸಚಿವ ಎಂ.ವೈ. ಘೋರ್ಪಡೆ ಅವರ ಪುತ್ರರಾಗಿದ್ದರು. ರಾಜವಂಶದ ಪರಂಪರೆಯ ಜೊತೆಗೆ ಸಾರ್ವಜನಿಕ ಜೀವನದಲ್ಲೂ ಅವರು ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದರು.
ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಲ್ಲಿ ಕಾರ್ತಿಕೇಯ ಘೋರ್ಪಡೆ ಅವರು ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ವಿಶೇಷವಾಗಿ ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಅವರ ಪ್ರಭಾವ ಗಮನಾರ್ಹವಾಗಿದ್ದು, ಪಕ್ಷದ ವಿವಿಧ ಕಾರ್ಯಕ್ರಮಗಳು ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಅವರು ಪ್ರಮುಖ ಪಾತ್ರವಹಿಸುತ್ತಿದ್ದರು.
ಇಂದು ಸಂಡೂರಿನಲ್ಲಿ ಅಂತ್ಯಕ್ರಿಯೆ
ಕಾರ್ತಿಕೇಯ ಘೋರ್ಪಡೆ ಅವರ ಅಂತ್ಯಕ್ರಿಯೆ ಇಂದು ಸಂಜೆ ಸಂಡೂರಿನಲ್ಲಿ ನಡೆಯಲಿದೆ. ಅವರ ಅಂತಿಮ ದರ್ಶನಕ್ಕಾಗಿ ರಾಜಕೀಯ ಮುಖಂಡರು, ಸಾರ್ವಜನಿಕರು ಹಾಗೂ ರಾಜವಂಶದ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.
MUST WATCH : ತುಮಕೂರಿಗರೇ ಹುಷಾರ್.. ಹುಷಾರ್ – WORK FROM HOME JOBಗೆ ಜಾಯಿನ್ ಆಗೋ ಮುನ್ನ ಈ ಸ್ಟೋರಿ ನೋಡಿ? | TUMAKURU |




