ಕಾಲೇಜು ಶುಲ್ಕದ ಹಣ ಸಾಲ ಕೊಟ್ಟು ಸಂಕಷ್ಟ – ವಿದ್ಯಾರ್ಥಿನಿ Suicide

ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ರೂಪಾಯಿಯನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಹಣ ಮರಳಿ ಸಿಗದೇ ಸಂಕಷ್ಟಕ್ಕೆ ಸಿಲುಕಿ Suicide ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ : ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು PUC ವಿದ್ಯಾರ್ಥಿ Suicide..!
ಆಗಿದ್ದೇನು..?
ಮೃತ ವಿದ್ಯಾರ್ಥಿನಿಯನ್ನು ಗಾಯತ್ರಿ ಎಂದು ಗುರುತಿಸಲಾಗಿದ್ದು, ಗಾಯತ್ರಿ ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ 10 ಸಾವಿರ ರೂಪಾಯಿಯನ್ನು ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥ ಸಂತೋಷ ಮಾಧೇದ ನಾಯ್ಕ ಎಂಬಾತ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ 10 ಸಾವಿರ ರೂಪಾಯಿ ಸಾಲ ಪಡೆದಿದ್ದ.

ಆದರೆ ಗಡುವು ಮುಗಿದರೂ ಹಣವನ್ನು ವಾಪಸ್ ನೀಡಿಲ್ಲ. ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Suicide – ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಸಾವಿನ ನಿಖರ ಕಾರಣ ಹಾಗೂ ಹಣದ ವ್ಯವಹಾರದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನು ನೋಡಿ : ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ – ಸರ್ಕಾರದ ವಿರುದ್ಧ VIJAYENDRA ಕಿಡಿ




