KPSC ನೇಮಕಾತಿ ಹಗರಣದ ಕಿಂಗ್ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು

KPSC ನೇಮಕಾತಿ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಸವರಾಜ್ ಕನ್ನಾಳೆಗೆ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕನ್ನಾಳೆ ಅವರು ಹೆಣ್ಣುಮಗುವಿನ ತಂದೆಯಾಗಿದ್ದು, ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ರು.
ಷರತ್ತುಬದ್ಧ ಮಧ್ಯಂತರ ಜಾಮೀನು
ಈ ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠ, ಐದು ದಿನಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ.
READ THIS : ಬಸವರಾಜ್ ಕನ್ನಾಳೆ ಡೈರಿಯಲ್ಲಿ ಬಯಲಾಯ್ತು ಲಕ್ಷ ಲಕ್ಷ ಹಣದ ಲೆಕ್ಕ!

ಕೋರ್ಟ್ ವಿಧಿಸಿದ ಷರತ್ತುಗಳೇನು?
ಇನ್ನು ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಾಲಯ ಹಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಐದು ದಿನಗಳ ಮಧ್ಯಂತರ ಜಾಮೀನು ಅವಧಿಯಲ್ಲಿ ಬಸವರಾಜ್ ಕನ್ನಾಳೆ ಅವರ ಜೊತೆಯಲ್ಲೇ ಪೊಲೀಸರು ಇರಬೇಕು ಎಂದು ಸೂಚಿಸಲಾಗಿದೆ.
KPSC ನೇಮಕಾತಿ ಹಗರಣ – ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಅಷ್ಟೇ ಅಲ್ಲ, ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಬಳಸುವಂತಿಲ್ಲ ಎಂಬ ಷರತ್ತನ್ನೂ ವಿಧಿಸಲಾಗಿದೆ. ಈ ಎಲ್ಲಾ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

MUST WATCH : ಹೂ ಕೀಳುತ್ತಿದ್ದ ವೇಳೆ ಭಕ್ಷಕ ಚಿರತೆ ದಾಳಿ – ಅರ್ಚಕ ಸ್ಥಳದಲ್ಲೇ ಸಾ*..!




