ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ Kholi !

ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಮುನ್ನ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆಯಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹ್ಯಾಮ್ಸ್ಟ್ರಿಂಗ್ ಗಾಯದ ಕಾರಣ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ
ಜೂನ್ 13ರಿಂದ ಧರ್ಮಶಾಲಾದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿ ಆರಂಭವಾಗಲಿದ್ದು, ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ. ಇತ್ತೀಚೆಗೆ ನಡೆದ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯಶಸ್ಸಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫೈನಲ್ ಪಂದ್ಯದಲ್ಲಿ ಅಜೇಯ 75 ರನ್ಗಳ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಈ ಬಾರಿಯ ಐಪಿಎಲ್ನಲ್ಲಿ Kholi 16 ಪಂದ್ಯಗಳಲ್ಲಿ 675 ರನ್ಗಳನ್ನು ಕಲೆಹಾಕಿ ಗಮನ ಸೆಳೆದಿದ್ದರು. 166ರ ಸ್ಟ್ರೈಕ್ರೇಟ್ನೊಂದಿಗೆ ಬ್ಯಾಟಿಂಗ್ ನಡೆಸಿದ ಅವರು ಮತ್ತೊಮ್ಮೆ ತಮ್ಮ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದರು.
ಇದನ್ನು ಓದಿ : Vaibhav Suryavanshi ಗೆ ಕ್ರಿಕೆಟ್ ಟಿಪ್ಸ್ ನೀಡಿದ Virat Kohli..!!

ರೋಹಿತ್ ಶರ್ಮಾ ಸರಣಿಗೆ ಲಭ್ಯರಾಗುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ
ಇದರ ನಡುವೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಫಿಟ್ನೆಸ್ ಕೂಡ ಚರ್ಚೆಗೆ ಗ್ರಾಸವಾಗಿದೆ. ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಅವರನ್ನು ಅಫ್ಘಾನಿಸ್ತಾನ ಸರಣಿಗೆ ಆಯ್ಕೆ ಮಾಡಲಾಗಿದ್ದರೂ, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Kholi ಅಲಭ್ಯ – ಭಾರತ ತಂಡಕ್ಕೆ ದೊಡ್ಡ ಸವಾಲು
ಈಗಾಗಲೇ ಕೊಹ್ಲಿ ಸರಣಿಯಿಂದ ಹೊರಬಿದ್ದಿರುವ ಹಿನ್ನೆಲೆಯಲ್ಲಿ, ರೋಹಿತ್ ಕೂಡ ಲಭ್ಯವಾಗದಿದ್ದರೆ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಹೆಚ್ಚುವರಿ ಸವಾಲು ಎದುರಾಗುವ ಸಾಧ್ಯತೆ ಇದೆ.

ಇದನ್ನು ನೋಡಿ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾ*




