
KOLAR : ತಮ್ಮ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ನಡೆದಿದೆ.
ಇನ್ನು ಮೃತರನ್ನು ಶೆಟ್ಟಿಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತೆ ಎಂದು ಗುರುತಿಸಲಾಗಿದ್ದು, ಇವರಿಬ್ಬರ ಪ್ರೀತಿಗೆ ಇಬ್ಬರ ಕುಟುಂಬಗಳು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಪ್ರೇಮಿಗಳು ಬೈಕ್ ನಿಲ್ಲಿಸಿ, ಕೋಲಾರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ರೈಲಿನಡಿ ಸಿಲುಕಿದ ಪರಿಣಾಮ ಇಬ್ಬರ ದೇಹಗಳು ಚೂರಾಗಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಇನ್ನು ವಿಷಯ ತಿಳಿದು ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.




