Koppal ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗೂಡ್ಸ್ ವಾಹನ ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಪರಿಣಾಮ ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Koppal ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ ಹೊಂದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಪ್ರದೇಶದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಡಿವೈಡರ್ ದಾಟಿ ಬಂದ ಗೂಡ್ಸ್ ವಾಹನ
ಪ್ರಾಥಮಿಕ ಮಾಹಿತಿಯ ಪ್ರಕಾರ, ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಏಕಾಏಕಿ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಓಮ್ನಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಭಾರೀ ಅನಾಹುತ ಸಂಭವಿಸಿದೆ.
MUST READ : Dina Bhavishya : ಇಂದು ಈ ರಾಶಿಗೆ, ಶನಿ ದೆಸೆಯಿಂದ ಸಂಪತ್ತು.. ಅದೃಷ್ಟ..!

ಮೃತರು ಹಾವೇರಿ ಜಿಲ್ಲೆಯವರು
ಅಪಘಾತದಲ್ಲಿ ಮೃತಪಟ್ಟವರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45), ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳಾಗಿದ್ದು, ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣವೇ ರಕ್ಷಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
MUST WATCH : 2028ಕ್ಕೆ ಮೈತ್ರಿ ಸರ್ಕಾರ ಫಿಕ್ಸ್ ಹೆಚ್ಡಿಕೆನೇ ಮುಂದಿನ ಸಿಎಂ ಎಂದ ನಿಂಗಪ್ಪ




