Bengaluru ಅಭಿವೃದ್ಧಿ ಖಾತೆ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ

Bengaluru : ಖಾತೆ ವಿಚಾರಕ್ಕೆ ಬೇಸರಗೊಂಡಿದ್ದ ಸಚಿವ ಕೃಷ್ಣ ಬೈರೇಗೌಡ ತಣ್ಣಗಾಗಿದ್ದಾರೆ. ಕೊನೆಗೂ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ (GBA Minister) ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಐವರು ಆಯುಕ್ತರೊಂದಿಗೆ ಸಭೆ
ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಕೃಷ್ಣ ಬೈರೇಗೌಡ ಅವರು ಜಿಬಿಎಯ ಐವರು ಆಯುಕ್ತರೊಂದಿಗೆ ಸಭೆ ನಡೆಸಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಪ್ರಗತಿಯಲ್ಲಿರುವ ಯೋಜನೆಗಳು ಹಾಗೂ ನಗರಾಭಿವೃದ್ಧಿ ಕುರಿತ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಇದನ್ನು ಓದಿ : ಹೇಮಾವತಿ ಡ್ಯಾಂನ ಸೌಂದರ್ಯ ಕಣ್ತುಂಬಿಕೊಂಡ ಕೃಷ್ಣ ಬೈರೇಗೌಡ

ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್
ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಕ್ಲಾಸ್ ತೆಗೆದುಕೊಂಡರು. ರಸ್ತೆ ಕಾಮಗಾರಿಗಳ ಗುಣಮಟ್ಟ ಹಾಗೂ ನಿರ್ವಹಣೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಸಚಿವರು, ನಗರದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
Bengaluru ನಗರದಲ್ಲಿ ಗುಂಡಿಯಿಲ್ಲದ ರಸ್ತೆ ನಿರ್ಮಿಸಲು ಸಾಧ್ಯವಿಲ್ಲವೇ?
“ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ. ಗುಂಡಿಯಿಲ್ಲದ ರಸ್ತೆ ನಿರ್ಮಿಸಲು ಸಾಧ್ಯವಿಲ್ಲವೇ? ಒಂದು ಕಡೆ ರಸ್ತೆ ನಿರ್ಮಿಸಿದರೆ ಮತ್ತೊಂದು ಕಡೆ ಗುಂಡಿ ಬೀಳುವುದು ಯಾಕೆ?” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಇದೇ ವೇಳೆ, “ಬೇರೆ ರಾಜ್ಯಗಳಲ್ಲಿ ಈ ರೀತಿಯ ಸಮಸ್ಯೆಯಿಲ್ಲ. ಬೆಂಗಳೂರು ಅಂದರೆ ಗುಂಡಿ ಯಾಕೆ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನು ನೋಡಿ : ಮಕ್ಕಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಸ್ಕೂಲ್ ವ್ಯಾನ್ ಗಳ ಮೇಲೆ ಪೊಲೀಸರ ಕಟ್ಟೆಚ್ಚರ




