Suicide ಮಾಡಿಕೊಂಡ ಸಂಚಿತಾ ಉಗಾಲೆ – ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಅವರ ಆತ್ಮಹತ್ಯೆ ಸುದ್ದಿ ಸಿನಿರಂಗಕ್ಕೆ ಆಘಾತ ಉಂಟುಮಾಡಿದೆ. ‘ಕುಂಕುಮ ಭಾಗ್ಯ’, ‘ವಾಗ್ಲೆ ಕಿ ದುನಿಯಾ’ ಸೇರಿದಂತೆ ಹಲವು ಧಾರಾವಾಹಿಗಳ ಮೂಲಕ ಗುರುತಿಸಿಕೊಂಡಿದ್ದ ಸಂಚಿತಾ ಉಗಲೆ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು Suicide ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ
ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇದನ್ನು ಓದಿ : ಮದುವೆಗೆ ಹೆಣ್ಣು ಸಿಗಲಿಲ್ಲವೆಂದು 26 ವರ್ಷದ ಯುವಕ Suicide..!!

ಅಕಸ್ಮಿಕ ಸಾವು ಪ್ರಕರಣ ದಾಖಲು
ಘಟನೆ ಸಂಬಂಧ ಅಚೋಲೆ ಪೊಲೀಸ್ ಠಾಣೆಯಲ್ಲಿ ಅಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಬಹಿರಂಗವಾಗಿಲ್ಲ.
Suicide ಮಾಡಿಕೊಂಡ ಸಂಚಿತಾ ಉಗಲೆ ಸಿನಿ ಪಯಣ
ಸಂಚಿತಾ ಉಗಲೆ ಅವರು ‘ದಿಲ್ವಾಲಿ ದುಲ್ಹಾ ಲೇ ಜಾಯೇಗಿ’ ಧಾರಾವಾಹಿಯಲ್ಲಿ ಸುಕೂನ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದರು. ‘ಕುಂಕುಮ ಭಾಗ್ಯ’, ‘ವಾಗ್ಲೆ ಕಿ ದುನಿಯಾ’ ಧಾರಾವಾಹಿಗಳ ಜೊತೆಗೆ ‘ಛಾವಾ’ ಸಿನಿಮಾದಲ್ಲೂ ತಾರಾಬಾಯಿ ಪಾತ್ರದಲ್ಲಿ ಕಾಣಿಸಿಕೊಂಡು ಸಿನಿಪ್ರಿಯರ ಗಮನ ಸೆಳೆದಿದ್ದರು.

ಇದನ್ನು ನೋಡಿ : ದೇವರ ದರ್ಶನ ಮುಗಿಸಿ ಬರ್ತಿದ್ದಾಗ ದುರಂತ – ನೀರಿನಲ್ಲಿ ಮುಳುಗಿ ಮೂವರು ಸಾ*




