Karnataka Bandh : ಹಲವು ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನಜೀವನ, ಕರ್ನಾಟಕ ಬಂದ್ಗೆ ಸಿಗದ ಜನ ಬೆಂಬಲ

ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೀದರ್, ಉತ್ತರ ಕನ್ನಡ, ಗದಗ, ಯಾದಗಿರಿ, ವಿಜಯಪುರ, ಧಾರವಾಡ, ಹಾಸನ ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಸ್, ಆಟೋ ಮತ್ತು ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಮುಂದುವರಿದಿದ್ದು, ಅಂಗಡಿ-ಮುಂಗಟ್ಟುಗಳು ಕೂಡ ತೆರೆದಿವೆ.
ಬೀದರ್: ಜಿಲ್ಲೆಯಲ್ಲಿ ಬಂದ್ನ ಯಾವುದೇ ಪರಿಣಾಮ ಕಂಡುಬಂದಿಲ್ಲ. ಬಸ್, ಆಟೋ, ಖಾಸಗಿ ವಾಹನಗಳ ಸಂಚಾರ ಹಾಗೂ ವ್ಯಾಪಾರ-ವಹಿವಾಟು ಸಹಜವಾಗಿದ್ದು, ಹೋಟೆಲ್ಗಳೂ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಉತ್ತರ ಕನ್ನಡ: ಗಡಿ ಜಿಲ್ಲೆಯಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಹನ ಸಂಚಾರ ಸಹಜವಾಗಿದ್ದು, ಪ್ರಮುಖ ಸಂಘಟನೆಗಳಿಂದ ಬಂದ್ಗೆ ಬೆಂಬಲ ಸಿಕ್ಕಿಲ್ಲ.

ಗದಗ: ಜಿಲ್ಲೆಯಲ್ಲಿ ಬಂದ್ನ ಯಾವುದೇ ಪರಿಣಾಮ ಕಂಡುಬಂದಿಲ್ಲ. ಅಂಗಡಿ-ಮುಂಗಟ್ಟುಗಳು, ವ್ಯಾಪಾರ-ವಹಿವಾಟು ಹಾಗೂ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಎಂದಿನಂತೆ ನಡೆದಿದೆ.
ಪ್ರಮುಖ ಪ್ರತಿಭಟನೆಗಳೂ ಕಂಡುಬಂದಿಲ್ಲ. ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಎಂದಿನಂತೆ ತೆರಳಿದ್ದಾರೆ.
ಇದನ್ನು ಓದಿ : ಕರ್ನಾಟಕ ಬಂದ್ – ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ?
ವಿಜಯಪುರ: ಇಲ್ಲಿಯೂ ಬಂದ್ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರಿಗೆ ಬಸ್ಗಳು ಹಾಗೂ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿದ್ದು, ಅಂಗಡಿ-ಮುಂಗಟ್ಟುಗಳು ತೆರೆದಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರಮುಖ ವೃತ್ತಗಳಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಧಾರವಾಡ: ನಗರದಲ್ಲಿ ಬಂದ್ನ ಪರಿಣಾಮ ಕಾಣಿಸಲಿಲ್ಲ. ಬಸ್ಗಳು, ಖಾಸಗಿ ವಾಹನಗಳು ಹಾಗೂ ಜನರ ಸಂಚಾರ ಸಹಜವಾಗಿದ್ದು, ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿವೆ. ಕೆಲವೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಹಾಸನ: ಜಿಲ್ಲೆಯಲ್ಲಿ ಕೂಡ ಬಂದ್ಗೆ ಯಾವುದೇ ಗಮನಾರ್ಹ ಬೆಂಬಲ ಕಂಡುಬಂದಿಲ್ಲ. ಬಸ್ ಮತ್ತು ಆಟೋ ಸಂಚಾರಕ್ಕೆ ಯಾವುದೇ ವ್ಯತ್ಯಯವಾಗಿಲ್ಲ.
ಹಾಸನದಿಂದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ವಿವಿಧ ಭಾಗಗಳಿಗೆ ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ.
ಬಾಗಲಕೋಟೆ: ಬೆಳಗ್ಗಿನಿಂದಲೇ ನಗರದಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಯಲ್ಲಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಹಾಗೂ ಆಟೋರಿಕ್ಷಾಗಳು ಎಂದಿನಂತೆ ಸಂಚರಿಸುತ್ತಿವೆ.
ಒಟ್ಟಾರೆ, ಹಲವು ಜಿಲ್ಲೆಗಳಲ್ಲಿ ಪ್ರಮುಖ ಸಂಘಟನೆಗಳಿಂದ ಬಂದ್ಗೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಜನಜೀವನ ಸಹಜವಾಗಿದ್ದು, ಸಾರಿಗೆ ಮತ್ತು ವ್ಯಾಪಾರ ಚಟುವಟಿಕೆಗಳು ಎಂದಿನಂತೆ ಮುಂದುವರಿದಿವೆ.

ಇದನ್ನು ನೋಡಿ : ಕನ್ನಡ ಪರ ಸಂಘಟನೆಗಳಿಂದ KARNATAKA BAND – ತುಮಕೂರಿನಲ್ಲಿ ಬಂದ್ ಹೇಗಿರುತ್ತೆ ಗೊತ್ತಾ?




