ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ – Kolar ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ

Kolar ನಗರಸಭೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದು, ಆರೋಗ್ಯ ಶಾಖೆಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ
ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣ ಪತ್ರ ನೀಡಿರುವುದು, ಒಂದೇ ನೋಂದಣಿಯಲ್ಲಿ ಎರಡು ಮಕ್ಕಳಿಗೆ ಜನನ ಪ್ರಮಾಣ ಪತ್ರ ವಿತರಿಸಿರುವುದು ಸೇರಿದಂತೆ ಗಂಭೀರ ಅಕ್ರಮಗಳ ಆರೋಪ ಕೇಳಿಬಂದಿದೆ. ಅಲ್ದೇ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಜನನವಾಗದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣ ಪತ್ರ ನೀಡಿರುವ ಆರೋಪವೂ ಕೇಳಿಬಂದಿದೆ.
READ THIS : ದೆಹಲಿಗೆ ಬರುವಂತೆ ಸಿದ್ದುಗೆ ಹೈಕಮಾಂಡ್ ಬುಲಾವ್ – ಕಾರಣವೇನು?

ದಾಳಿ ವೇಳೆ ಹಲವು ಮಹತ್ವದ ದಾಖಲೆ ವಶಕ್ಕೆ
ಈ ಸಂಬಂಧ ಸಾರ್ವಜನಿಕರಿಂದ ನಿರಂತರವಾಗಿ ಲೋಕಾಯುಕ್ತ ಕಚೇರಿಗೆ ದೂರುಗಳು ಬಂದ ಹಿನ್ನೆಲೆ ಕೋಲಾರ ಲೋಕಾಯುಕ್ತ ಎಸ್ಪಿ ಆಂತೋಣಿ ಜಾನ್ ಅವರ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಆಂಜಿನಪ್ಪ ನೇತೃತ್ವದ ತಂಡ ನಗರಸಭೆ ಕಚೇರಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವು ಮಹತ್ವದ ದಾಖಲೆಗಳನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅಕ್ರಮಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

MUST WATCH : SIDDARAMAIAHಗೆ ಹೈಕಮಾಂಡ್ಗೆ ಬುಲಾವ್- CM ಕುರ್ಚಿ ಉಳಿಸಿಕೊಳ್ಳಲು ಸಿದ್ದು ಸರ್ಕಸ್




