Tumakuru : ಸಣ್ಣ ನೀರಾವರಿ ಇಲಾಖೆ ಎಇ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ತುಮಕೂರು, ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಸಣ್ಣ ನೀರಾವರಿ ಇಲಾಖೆ ಎಇ ಮನೆ ಮೇಲೆ ಲೋಕಾ ದಾಳಿ!
ತುಮಕೂರಿನಲ್ಲಿ ಸಣ್ಣ ನೀರಾವರಿ ಇಲಾಖೆಯ ತಿಪಟೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಧುಸೂದನ್ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಲೋಕಾ ದಾಳಿ. ಶಾಸಕರ ಬಳಿಕ ASI, ಗ್ರಾಮ ಲೆಕ್ಕಾಧಿಕಾರಿ ಬಂಧನ.!

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ
Tumakuru ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಆರಂಭಿಸಿದರು. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಾಗಿದ್ದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ
ಪ್ರಸ್ತುತ ಅಧಿಕಾರಿಗಳು ಮನೆ ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಚಿನ್ನಾಭರಣ, ನಗದು, ಬ್ಯಾಂಕ್ ಖಾತೆಗಳು ಹಾಗೂ ಇತರ ಆಸ್ತಿ ವಿವರಗಳ ಪರಿಶೀಲನೆ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಅಕ್ರಮ ಆಸ್ತಿಯ ಪ್ರಮಾಣದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

ಇದನ್ನು ನೋಡಿ : ಭೂಸ್ವಾಧೀನಕ್ಕೆ ಭುಗಿಲೆದ್ದ ವಿವಾದ – KUMARASWAMY ಸಭೆ ಬಗ್ಗೆ ಗೊಂದಲ




