ಗ್ಯಾರಂಟಿ ಹೆಸರಲ್ಲಿ ಲೂಟಿ – ಚುನಾವಣಾ ಲಕ್ಷ್ಮಿಯಾದ Gruhalakshmi ಯೋಜನೆ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಮುನ್ನ ಹಲವು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಯೋಜನೆಗಳ ಲಾಭ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ
ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅದರ ಪರಿಣಾಮವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಎದುರಾಗುತ್ತಿವೆ. ಯೋಜನೆಗಳ ಲಾಭ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಇದನ್ನು ಓದಿ : ಸಿಎಂ ಬದಲಾವಣೆ ಬಳಿಕವೂ ಉತ್ತಮ ಆಡಳಿತದ ನಂಬಿಕೆ ಇಲ್ಲ – BY Vijayendra ಟೀಕೆ..!!

ಚುನಾವಣಾ ಲಕ್ಷ್ಮಿಯಾದ Gruhalakshmi ಯೋಜನೆ
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಹಲವು ತಿಂಗಳುಗಳ ಕಾಲ ತಡೆಹಿಡಿಯಲಾಗಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಅದನ್ನು ಬಿಡುಗಡೆ ಮಾಡುವ ಮೂಲಕ “ಚುನಾವಣಾ ಲಕ್ಷ್ಮಿ”ಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು ನಿಭಾಯಿಸಲು ಲಕ್ಷಾಂತರ ಫಲಾನುಭವಿಗಳನ್ನು ಕಡಿತಗೊಳಿಸುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಅವರು ಟೀಕಿಸಿದ್ದಾರೆ.
ಇದನ್ನು ನೋಡಿ : ಆರೋಗ್ಯ ಕ್ಷೇತ್ರದಲ್ಲಿ ಯು.ಟಿ ಖಾದರ್ ಕ್ರಾಂತಿ ರಾತ್ರಿಯಿಂದ ಮುಂಜಾನೆವರೆಗೂ ಸಚಿವರು ಸಭೆ





