
ಪಾವಗಡದಲ್ಲಿ ACCIDENT – ನಾಲ್ವರಿಗೆ ಗಂಭೀರ ಗಾಯ!
ಪಾವಗಡ ಪಟ್ಟಣದಲ್ಲಿ ಕಾಲೇಜು ಬಸ್ಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾಲೇಜು ಬಸ್ಗೆ ಡಿಕ್ಕಿ ಹೊಡೆದ ಲಾರಿ
ಪಾವಗಡ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಈ ಅಪಘಾತ ನಡೆದಿದೆ. ಪಾವಗಡದ ಎಸ್.ಎಸ್.ಕೆ. ಕಾಲೇಜಿನ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ, ಏಕಾಏಕಿ ಎಮ್ಮೆಗಳು ರಸ್ತೆಗೆ ನುಗ್ಗಿವೆ. ಇದರಿಂದ ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಲಾರಿ ನಿಯಂತ್ರಣ ತಪ್ಪಿ ಕಾಲೇಜು ಬಸ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
READ THIS : ಹಿಟ್ ಆ್ಯಂಡ್ ರನ್ಗೆ ವಾಕಿಂಗ್ಗೆ ತೆರಳಿದ್ದ ಶಿಕ್ಷಕಿ ಬಲಿ!

ಮೂವರು ವಿದ್ಯಾರ್ಥಿಗಳಿಗೆ ಗಾಯ
ಡಿಕ್ಕಿಯ ರಭಸಕ್ಕೆ ಕಾಲೇಜು ಬಸ್ನ ಹಿಂಭಾಗ ಹಾಗೂ ಲಾರಿಯ ಮುಂಭಾಗ ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ACCIDENT – ಪೊಲೀಸರು ಭೇಟಿ, ಪರಿಶೀಲನೆ
ಇನ್ನು ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

MUST WATCH : ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್




