ಎರಡು ಕಾರಿಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ – ಭೀಕರ ಸರಣಿ Accident ಗೆ ಇಬ್ಬರು ದುರ್ಮರಣ

ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಸರಣಿ Accident ಸಂಭವಿಸಿದೆ. ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.

ಕಾರುಗಳಿಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ
ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರುಗಳು ಜಖಂಗೊಂಡಿದ್ದು, ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಗೋಪಿ, ಹಾಗೂ ಮತ್ತೋರ್ವ ಕಾರು ಚಾಲಕ ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನು ಓದಿ : Bus ಡಿಕ್ಕಿಯಾಗಿ ಭೀಕರ ಅಪಘಾತ.. ಮಗು ಸೇರಿ ಮೂವರು ಸಾವು

ಇಬ್ಬರು ಸಾವು – ಒಬ್ಬರಿಗೆ ಗಂಭೀರ ಗಾಯ
ಕಾರಿನಲ್ಲಿದ್ದ ಮಂಜುನಾಥ್ ಎಂಬುವವರಿಗೆ ಗಾಯಗಳಾಗಿದ್ದು, ಕೂಡಲೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಲಾರಿ ಹಾಗೂ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನು ನೋಡಿ : ಕಾವೇರಿ ನೀರಿಗೆ ಕನ್ನಡಿಗರ ಆಕ್ರೋಶ ಬಂದ್ ಎಫೆಕ್ಟ್ ಎಲ್ಲೆಲ್ಲಿ ಹೇಗಿತ್ತು ಗೊತ್ತಾ




