
ಪ್ರೀತಿಸಿ ಮದ್ವೆ ಆಗಿದ್ದ ಮಹಿಳೆ ಅನುಮಾನಾಸ್ಪದ ಸಾವು – ಚಿತ್ರದುರ್ಗದಲ್ಲಿ LOVE JIHAD ಆರೋಪ
ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. 30 ವರ್ಷದ ಆಶಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪತಿ ಹಾಗೂ ಆತನ ಕುಟುಂಬಸ್ಥರು ಕಿರುಕುಳ ನೀಡಿ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ತಂದೆ ಆರೋಪಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!
ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡು ಗ್ರಾಮದ ನಿವಾಸಿಯಾಗಿದ್ದ ಆಶಾ, ಮೂರು ವರ್ಷಗಳ ಹಿಂದೆ ಹಿರಿಯೂರು ಪಟ್ಟಣದ 40 ವರ್ಷದ ಇಮ್ರಾನ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಎರಡೂವರೆ ವರ್ಷದ ಮಗುವಿದೆ. ಆದರೆ ಇದೀಗ ಆಶಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ವಿಚಾರ ತಿಳಿಯುತ್ತಿದ್ದಂತೆ ಗಂಡ ಪರಾರಿ!
ಇನ್ನು ಆಶಾ ನೇಣು ಬಿಗಿದ್ದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಆಕೆಯ ಪತಿ ಹಿರಿಯೂರು ಆಸ್ಪತ್ರೆಗೆ ಗಾಬರಿಯಲ್ಲಿ ಕರೆ ತಂದಿದ್ದಾನೆ. ಯಾವಾಗ ಆಕೆ ಪ್ರಾಣ ಬಿಟ್ಟಿದ್ದಾಳೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆಯೇ ಆತ ಅಲ್ಲಿಂದ ಪರಾರಿ ಆಗಿ, ನಾಪತ್ತೆ ಆಗಿದ್ದಾನೆ ಎಂದು ವರದಿಯಾಗಿದೆ. ಆದರೆ ಆಶಾ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಇಮ್ರಾನ್ ಆಸ್ಪತ್ರೆಯಿಂದ ತೆರಳಿದ್ದು, ಬಳಿಕ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಹಣಕ್ಕಾಗಿ ನಿರಂತರ ಕಿರುಕುಳ!
ಮತ್ತೊಂದೆಡೆ ಮೃತ ಆಶಾಳ ತಂದೆ ನಾಗರಾಜ್, ತಮ್ಮ ಮಗಳಿಗೆ ಮದುವೆಯಾದ ಬಳಿಕ ಪತಿಯ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹಣ ತರುವಂತೆ ಪತಿ ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದಷ್ಟೇ ಸಾಲ ಮಾಡಿ ಒಂದು ಲಕ್ಷ ರೂಪಾಯಿ ನೀಡಿದ್ದೆವು. ಹಣಕ್ಕಾಗಿ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ.
READ THIS : ಕೊಪ್ಪಳದಲ್ಲೂ ‘Love Jihad’ – ಹಿಂದೂ ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ನ್ಯಾಯ ಒದಗಿಸುವಂತೆ ಆಗ್ರಹ
ಇನ್ನು ಮಗಳ ಸಾವಿನ ಕುರಿತು ಹಿರಿಯೂರು ಪೊಲೀಸ್ ಠಾಣೆಗೆ ದೂರು ನೀಡಿರುವ ನಾಗರಾಜ್, ಇದು ಕೊಲೆ ಎಂದು ಆರೋಪಿಸಿದ್ದಾರೆ. ತಮ್ಮ ಮಗಳ ಸಾವಿಗೆ ಪತಿ ಇಮ್ರಾನ್ ಹಾಗೂ ಆತನ ಕುಟುಂಬಸ್ಥರೇ ಕಾರಣ ಎಂದು ದೂರಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಗಳ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪೊಲೀಸರ ಮುಂದೆ ಮನವಿ ಮಾಡಿದ್ದಾರೆ.
ಚಿತ್ರದುರ್ಗದಲ್ಲಿ ಲವ್ ಜಿಹಾದ್ ಆರೋಪ
ಇದರ ಮಧ್ಯೆ ಜಿಲ್ಲೆಯ ಹಿಂದೂ ಜಾಗರಣ ವೇದಿಕೆ ಭಜರಂಗದಳ, ವಿಶ್ವಹಿಂದೂ ಪರಿಷದ್ ಲವ್ ಜಿಹಾದ್ ಅನುಮಾನ ವ್ಯಕ್ತಪಡಿಸಿದೆ. LOVE JIHAD ಆರೋಪ ವ್ಯಕ್ತಪಡಿಸಿರುವ ಹಿಂದೂಪರ ಕಾರ್ಯಕರ್ತರು. ಖುದ್ದು ಪೊಲೀಸ್ ಅಧಿಕಾರಿಗಳನ್ನ ಭೇಟಿಯಾಗಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಒಟ್ಟಿನಲ್ಲಿ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ 30 ವರ್ಷದ ಆಶಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪತಿ ಹಾಗೂ ಕುಟುಂಬಸ್ಥರ ವಿರುದ್ಧ ಕಿರುಕುಳ ಮತ್ತು ಕೊಲೆಯ ಆರೋಪ ಕೇಳಿಬಂದಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆಶಾ ಸಾವಿನ ನಿಖರ ಕಾರಣ ಹಾಗೂ ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ತಿಳಿದುಬರಬೇಕಿದೆ.

MUST WATCH : ಸೀತಕಲ್ಲು ದೇವಸ್ಥಾನದಲ್ಲಿ ಹೊಸ ವಿವಾದ – ನ್ಯಾಯಕ್ಕಾಗಿ ಅರ್ಚಕ ಕುಟುಂಬದ ಅಳಲು




