ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಆರಂಭವಾದ ಮೇಲೆ ಎರಡನೇ ಬಾರಿಗೆ ವಾಣಿಜ್ಯ LPG ಸಿಲಿಂಡರ್ಗಳ ಬೆಲೆ ಇಳಿಕೆ; ಗೃಹ ಬಳಕೆಯ ಸಿಲಿಂಡರ್ ಬೆಲೆ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದ್ದರೂ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರವನ್ನು ಕಡಿಮೆ ಮಾಡಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಕ್ಕೆ ಸ್ವಲ್ಪ ನೆಮ್ಮದಿ ತಂದಿದೆ.
ಎರಡನೇ ಬಾರಿಗೆ ಬೆಲೆ ಇಳಿಕೆ!
ಪಶ್ಚಿಮ ಏಷ್ಯಾದ ಸಂಘರ್ಷದ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎರಡನೇ ಬಾರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ಮಾಡಿವೆ. ಸಂಘರ್ಷದ ಆರಂಭದ ಅವಧಿಯಲ್ಲಿ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾಗಿತ್ತು.

19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ
ಆಗಸ್ಟ್ 1ರಿಂದ 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ₹209ರಷ್ಟು ಇಳಿಕೆಯಾಗಿದ್ದು, ಹೊಸ ದರ ₹2,872 ಆಗಿದೆ. ಇದಕ್ಕೂ ಮೊದಲು ಜುಲೈ 1ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹183.50 ಇಳಿಕೆ ಮಾಡಲಾಗಿತ್ತು. ಕಳೆದ ತಿಂಗಳು ಈ ಸಿಲಿಂಡರ್ ಬೆಲೆ ₹3,113 ಇತ್ತು.
ಇದನ್ನು ಓದಿ : LPG ಗ್ರಾಹಕರೇ ಗಮನಿಸಿ! ಜೂನ್ 30ರೊಳಗೆ ಈ 5 ಕೆಲಸ ಮಾಡದಿದ್ದರೆ ಸಬ್ಸಿಡಿ, ಕನೆಕ್ಷನ್ ಬಂದ್ ಆಗುವ ಸಾಧ್ಯತೆ..!!
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹200 ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರದಂತೆ ಸಿಲಿಂಡರ್ ಬೆಲೆ ₹2,821 ಆಗಿದೆ.

ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಬದಲಾವಣೆ ಇಲ್ಲ
14.2 ಕೆ.ಜಿ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಗೃಹ ಬಳಕೆಯ ಸಿಲಿಂಡರ್ ಬೆಲೆ ₹942ರಲ್ಲಿ ಮುಂದುವರಿದಿದೆ.
ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ವಾಣಿಜ್ಯ ಸಿಲಿಂಡರ್ ದರ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಆದರೆ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪ್ರಮುಖ ಬದಲಾವಣೆ ಮಾಡಿಲ್ಲ.

ಇದನ್ನು ನೋಡಿ : MANDYAದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು – ಪಟ್ಟಾಪಟ್ಟಿ ಚಡ್ಡಿ ತೊಟ್ಟು ಪ್ರತಿಭಟನೆ




