LPL 2026 : ಭಾರತ ಅಂಡರ್-19 ತಂಡದ ಮಾಜಿ ಆಟಗಾರ ಮಂಜೀತ್ ಕಲ್ರಾ ಶ್ರೀಲಂಕಾದಲ್ಲಿ ಬಂಧನ!

ಲಂಕಾ ಪ್ರೀಮಿಯರ್ ಲೀಗ್ (LPL) ವೇಳೆ ಆಟಗಾರನಿಗೆ ಹಣದ ಆಮಿಷ ಒಡ್ಡಿದ ಆರೋಪದ ಮೇಲೆ ಭಾರತದ ಮಾಜಿ ಅಂಡರ್-19 ವಿಶ್ವಕಪ್ ವಿಜೇತ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.
ಅಂಡರ್-19 ವಿಶ್ವಕಪ್ ವಿಜೇತ ಸ್ಟಾರ್ ಬಂಧನ
ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ವಿರೋಧಿ ವಿಶೇಷ ತನಿಖಾ ಘಟಕವು ಶುಕ್ರವಾರ ಕಲ್ರಾ ಅವರನ್ನು ವಶಕ್ಕೆ ಪಡೆದು ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದೆ. ಲಂಕಾ ಪ್ರೀಮಿಯರ್ ಲೀಗ್ಗೆ ಸಂಬಂಧಿಸಿದಂತೆ ಆಟಗಾರನೊಬ್ಬನಿಗೆ ಲಂಚ ನೀಡಲು ಯತ್ನಿಸಿದ ಆರೋಪ ಅವರ ವಿರುದ್ಧ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : U-19 ಫೈನಲ್ನಲ್ಲಿ Vaibhav Suryavanshi ಸ್ಫೋಟಕ ಶತಕ.!

2018ರ ವಿಶ್ವಕಪ್ ಹೀರೋ
27 ವರ್ಷದ ಮಂಜೋತ್ ಕಲ್ರಾ ಅವರು 2018ರ ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಭಾರತ ತಂಡದ ಪರ ಫೈನಲ್ ಪಂದ್ಯದಲ್ಲಿ ಅಜೇಯ 101 ರನ್ಗಳ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪೃಥ್ವಿ ಶಾ ನಾಯಕತ್ವದ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿ ವಿಶ್ವಕಪ್ ಗೆದ್ದಿತ್ತು. ಆ ತಂಡದಲ್ಲಿ ಇಂದಿನ ಭಾರತ ತಂಡದ ಪ್ರಮುಖ ಆಟಗಾರರಾದ ಶುಭಮನ್ ಗಿಲ್, ಅರ್ಶ್ದೀಪ್ ಸಿಂಗ್ ಹಾಗೂ ಶಿವಂ ಮಾವಿ ಕೂಡ ಸದಸ್ಯರಾಗಿದ್ದರು.
ಜಾಫ್ನಾ ಕಿಂಗ್ಸ್ ಸಹ-ಮಾಲೀಕ
ಮಂಜೋತ್ ಕಲ್ರಾ ಅವರು ಲಂಕಾ ಪ್ರೀಮಿಯರ್ ಲೀಗ್ನ ಜಾಫ್ನಾ ಕಿಂಗ್ಸ್ ಫ್ರಾಂಚೈಸಿಯ ಸಹ-ಮಾಲೀಕರಲ್ಲಿ ಒಬ್ಬರಾಗಿದ್ದಾರೆ. ಪಂದ್ಯಾವಳಿ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಅವರ ಬಂಧನ ನಡೆದಿರುವುದು ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ.

ಇನ್ನು ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಕ್ರೀಡಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಅಧಿಕಾರಿಗಳು ಹೆಚ್ಚಿನ ಮಾಹಿತಿ ಬಹಿರಂಗಪಡಿಸುವ ಸಾಧ್ಯತೆ ಇದೆ.
ಇದನ್ನು ನೋಡಿ : ಇಳಿ ವಯಸ್ಸಿನಲ್ಲೂ ಜಮೀನಿನಲ್ಲಿ ಕೆಲಸ – ವೃದ್ಧ ದಂಪತಿಯ ಕರುಣಾಜನಕ ಕಥೆ





