ಮಾದಾವರ-ತುಮಕೂರು Metro ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ.

ಬೆಂಗಳೂರು ಹಸಿರು ಮಾರ್ಗದ ಕೊನೆಯ ನಿಲ್ದಾಣವಾಗಿರುವ ಮಾದಾವರದಿಂದ ತುಮಕೂರುವರೆಗೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಇದರ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕೆಲಸ ಪೂರ್ಣಗೊಂಡಿದ್ದು, ಅದು ಸರ್ಕಾರದ ಕೈ ಸೇರಿದೆ. ಬೆಂಗಳೂರು ನಂತರ ತುಮಕೂರು ಬೆಳವಣಿಗೆಗೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಶೀಘ್ರವೇ ಮೆಟ್ರೋ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ರೈಲು ಯೋಜನೆ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ
ನಿನ್ನೆ ಸಂಜೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಜಿ. ಪರಮೇಶ್ವರ್ ಅವರು ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ ವರದಿಯನ್ನು ಅಧಿಕೃತವಾಗಿ ಸ್ವೀಕರಿಸಿದರು. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್ಆರ್ಸಿಎಲ್ ಸಿದ್ಧಪಡಿಸಿದೆ.


READ THIS : IPL ನ ಇಡೀ ಆವೃತ್ತಿ ಆಡದ ಧೋನಿ – 2027ಕ್ಕೂ ಮುನ್ನವೇ ನಿವೃತ್ತಿ?
ಗೃಹ ಸಚಿವರು ಹೇಳಿದ್ದೇನು?
ಈ ಕುರಿತು ಮಾತನಾಡಿದ ಪರಮೇಶ್ವರ್, ತುಮಕೂರಿಗೆ ಮೆಟ್ರೋ ರೈಲು ಬೇಕು ಅನ್ನೋ ನಿಟ್ಟಿನಲ್ಲಿ ಬಹಳ ದಿನಗಳಿಂದ ಪ್ರಯತ್ನ ನಡೀತಿತ್ತು. ಕಳೆದ ಬಜೆಟ್ನಲ್ಲಿ ಫೀಸಿಬಿಲಿಟಿ ಅಧ್ಯಯನ ಮಾಡೋದಾಗಿ ಸಿಎಂ ಹೇಳಿದ್ರು. ಹೈದರಾಬಾದ್ ಸಂಸ್ಥೆಯಿಂದ 3.5 ಕೋಟಿ ರೂ. ಕರ್ಚು ಮಾಡಿ ವರದಿ ಪಡೆಯಲಾಗಿದೆ. ಈ ವರದಿಯಲ್ಲಿ ಮಾದಾವರ ಟು ತುಮಕೂರು ಮೆಟ್ರೋ ಯೋಜನೆ ಮಾಡಬಹುದು ಅಂತ ಹೇಳಲಾಗಿದೆ ಎಂದು ತಿಳಿಸಿದರು.

ಇನ್ನು ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಬಿಎಂಆರ್ಸಿಎಲ್ ಮುಖ್ಯಸ್ಥರುಗಳಿದ್ದರು.
MUST WATCH : ಮಾದಿಗರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಸರ್ಕಾರದ ವಿರುದ್ಧ YH Huchaiah ಕಿಡಿ.!




