Madikeri ಸಮೀಪ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನಿಗೆ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಗೆ ವಾಲಿಕೊಂಡ ಘಟನೆ ನಡೆದಿದೆ…

Madikeri ಸಮೀಪ ಇಂದು ಮುಂಜಾನೆ ನಡೆದ ಘಟನೆ ಒಂದು ಭಾರೀ ಅನಾಹುತವನ್ನು ತಪ್ಪಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ನ ಚಾಲಕನಿಗೆ ಏಕಾಏಕಿ ಹೃದಯಾಘಾತ (Heart Attack) ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಗೆ ವಾಲಿಕೊಂಡ ಘಟನೆ ನಡೆದಿದೆ.
ಬೆಂಗಳೂರುದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಇಂದು (ಮೇ 8) ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ತಾಳತ್ ಮನೆ ಸಮೀಪ ತಲುಪುತ್ತಿದ್ದಾಗ ಚಾಲಕನಿಗೆ ತೀವ್ರ ಹೃದಯಾಘಾತ ಉಂಟಾಗಿದೆ.
ಹೃದಯಾಘಾತವಾದ ಕ್ಷಣದಲ್ಲೇ ಚಾಲಕ ಪರಿಸ್ಥಿತಿಯನ್ನು ಅರಿತು ಬಸ್ನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸಿದ್ದಾನೆ. ಬಳಿಕ ರಸ್ತೆ ಪಕ್ಕದ ಚರಂಡಿಯ ಬಳಿ ಬಸ್ ನಿಲ್ಲಿಸಿದ್ದಾನೆ. ಈ ವೇಳೆ ಬಸ್ ಸ್ವಲ್ಪ ವಾಲಿಕೊಂಡಿದ್ದರೂ, ದೊಡ್ಡ ಅನಾಹುತ ತಪ್ಪಿದೆ.
MUST READ : ಮದ್ಯ ಮಾರಾಟದ ಅಬ್ಬರ – 13 ವರ್ಷದ ದಾಖಲೆ ಉಡೀಸ್, ಆದಾಯ ಎಷ್ಟು?

ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ರಕ್ಷಣೆ
ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಬಸ್ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಘಟನೆ ಬಳಿಕ ಆತಂಕಗೊಂಡ ಪ್ರಯಾಣಿಕರಿಗೆ ತಕ್ಷಣವೇ ಪರ್ಯಾಯ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಅಸ್ವಸ್ಥಗೊಂಡ ಚಾಲಕನನ್ನು ಮಡಿಕೇರಿ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಮಡಿಕೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಬದಿಯಲ್ಲಿ ಬಸ್ ವಾಲಿಕೊಂಡು ನಿಂತಿದ್ದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು. ಆದರೆ ಸಮಯಕ್ಕೆ ಸರಿಯಾಗಿ ಬಸ್ ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ.
MUST WATCH : ಕೆಟ್ಟು ನಿಂತಿದೆ ಕುಡಿಯುವ ನೀರಿನ ಘಟಕ – ವರ್ಷದಿಂದ ನೀರಿಲ್ಲದೇ ಗ್ರಾಮಸ್ಥರ ಪರದಾಟ..! | SIRA NEWS |




