Madikeri -ಮೂರ್ನಾಡು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 40 ಅಡಿ ಆಳದ ಕಂದಕಕ್ಕೆ ಉರುಳಿದೆ. ಭಾರೀ ಹಾನಿಗೊಳಗಾದ ಕಾರಿನ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಡಗು ಜಿಲ್ಲೆಯ Madikeri – ಮೂರ್ನಾಡು ರಸ್ತೆಯಲ್ಲಿ ಸಿನಿಮೀಯ ರೀತಿಯ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಮಡಿಕೇರಿ ನಗರದ ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಈ ಅಪಘಾತ ಸಂಭವಿಸಿದೆ. ಮೂರ್ನಾಡು ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ.
MUST READ : Gold & Silver Rate : ಇಂದು ಕರ್ನಾಟಕ ಸೇರಿ ದೇಶಾದ್ಯಂತ ಚಿನ್ನ, ಬೆಳ್ಳಿ ಬೆಲೆ ಎಷ್ಟು…?

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ. ಆದರೆ, ಕಾರಿನ ಚಾಲಕ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಚಾಲಕನ ರಕ್ಷಣೆಗೆ ಸಹಕರಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಡಿಕೇರಿ ನಗರದ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.
MUST WATCH : ರಸ್ತೆಗಾಗಿ ಚರಂಡಿ ಮುಚ್ಚಿ ಅವಾಂತರ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ.




