Majabharatha ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು.

Majabharatha ಮತ್ತು ಕಾಮಿಡಿ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಇದನ್ನು ಓದಿ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

ಅರಣ್ಯ ಪ್ರದೇಶದಲ್ಲಿ ಶವ ಪತ್ತೆ!
ಹುಮ್ನಾಬಾದ್ ನಗರದ ಟೀಚರ್ಸ್ ಕಾಲೋನಿಯಲ್ಲಿ ವಾಸವಿದ್ದ 36 ವರ್ಷದ ಸಿದ್ದಾರ್ಥ ಪರಶನೂರ ಜೂನ್ 13ರಂದು ಸ್ನೇಹಿತರೊಂದಿಗೆ ಮನೆಯಿಂದ ಹೊರಟಿದ್ದರು. ಆದರೆ ಬಳಿಕ ಮನೆಗೆ ವಾಪಸ್ಸಾಗಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಿದ್ದಾರ್ಥ ಮೂರು ದಿನಗಳಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಸೋಮವಾರ ಬೆಳಿಗ್ಗೆ ಹುಮ್ನಾಬಾದ್ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಲು ಹೋಗಿದ್ರು. ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಪಕ್ಕದ ಅರಣ್ಯ ಪ್ರದೇಶದಲ್ಲಿ ಸಿದ್ದಾರ್ಥ ಪರಶನೂರ ಮೃತದೇಹ ಪತ್ತೆಯಾಗಿದೆ.

Majabharatha ಕಲಾವಿದನ ಸಾವಿಗೆ ನಿಖರ ಕಾರಣವೇನು?
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ತಿಳಿದುಬಂದಿಲ್ಲ ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.
ಇದನ್ನು ನೋಡಿ : ATAL BIHARI HOSTELನಲ್ಲಿ ಇದೆಂಥಾ ಅವ್ಯವಸ್ಥೆ- ಕರೆಂಟ್ ಇಲ್ಲದೇ ಕತ್ತಲಲ್ಲೇ 525 ಮಕ್ಕಳ ವಾಸ.!





