Bidar : 60 ಕೆಜಿ ಗಾಂಜಾ ಗಿಡಗಳು ಜಪ್ತಿ!

ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಬೆಳೆದಿದ್ದ ಬರೋಬ್ಬರಿ 60 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
READ THIS : ಪುಷ್ಪಾ ಸಿನಿಮಾ ಸ್ಟೈಲ್ನಲ್ಲಿ ಗಾಂಜಾ ಸಪ್ಲೈ ಮಾಡ್ತಿದ್ದ ಆರೋಪಿಗಳ ಬಂಧನ!

60 ಕೆಜಿ ಗಾಂಜಾ ಗಿಡಗಳು ಜಪ್ತಿ!
ಜಪ್ತಿಯಾದ ಗಾಂಜಾದ ಅಂದಾಜು ಮೌಲ್ಯ 30 ಲಕ್ಷದ 21 ಸಾವಿರ ರೂಪಾಯಿ ಎಂದು ತಿಳಿದುಬಂದಿದೆ. ಔರಾದ್ ತಾಲೂಕಿನ ಖಂಡಿಕೇರಿ ಗ್ರಾಮದ ಶಿವಾರದಲ್ಲಿರುವ ಸರ್ವೇ ನಂಬರ್ 70/2ರ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು.
ಗಾಂಜಾ ಗಿಡಗಳನ್ನು ವಶಕ್ಕೆ
ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಗಾಂಜಾ ಬೆಳೆದಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

MUS WATCH : ಖಾಸಗಿ ಶಾಲೆಗೆ ಸೆಡ್ಡು ಹೊಡೆದ ಶಾಲೆ – ಸರ್ಕಾರಿ ಶಾಲೆ ಅಂದ್ರೆ ಹೀಗಿರಬೇಕು.!




