
Rain Alert : ಕರ್ನಾಟಕದ ಹವಾಮಾನದಲ್ಲಿ ಬಿಗ್ ಟರ್ನ್, ಈ ದಿನದಿಂದ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ!
ಕರ್ನಾಟಕದಾದ್ಯಂತ ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ವಿಭಿನ್ನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಸದ್ಯ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಬಿಸಿಲು, ಸೆಖೆ ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಉಡುಪಿ ಮತ್ತು ಉತ್ತರ ಕನ್ನಡದ ಕೆಲ ತೀರ ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಸೆ.30ರಿಂದ ಕರಾವಳಿಯಲ್ಲಿ ಮಳೆ ಅಬ್ಬರ
ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26ರವರೆಗೆ ಅಲ್ಲಲ್ಲಿ ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಬಳಿಕ ಮಳೆ ಪ್ರಮಾಣ ತಾತ್ಕಾಲಿಕವಾಗಿ ಇಳಿಕೆಯಾಗುವ ನಿರೀಕ್ಷೆಯಿದ್ದು, ಸೆಪ್ಟೆಂಬರ್ 30ರಿಂದ ಮತ್ತೆ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವೇ ಮಳೆಯ ಬದಲಾವಣೆಗೆ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಈ ವಾಯುಭಾರ ಕುಸಿತ ಆಂಧ್ರ ಕರಾವಳಿ ಪ್ರವೇಶಿಸಿ ಉತ್ತರದತ್ತ ಚಲಿಸಿ, ಸೆಪ್ಟೆಂಬರ್ 28-29ರ ವೇಳೆಗೆ ಉತ್ತರ ಪ್ರದೇಶದ ಮೂಲಕ ನೇಪಾಳ ಪ್ರವೇಶಿಸಿ ಸೆಪ್ಟೆಂಬರ್ 30ರ ವೇಳೆಗೆ ಶಿಥಿಲಗೊಳ್ಳುವ ಸಾಧ್ಯತೆಯಿದೆ.
READ THIS : ರಾಜ್ಯದಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ – ಈ ಜಿಲ್ಲೆಗಳಗೆ ಯೊಲ್ಲೋ ಅಲರ್ಟ್!

ಮಲೆನಾಡಿನಲ್ಲಿ ಬಿಸಿಲು-ಮೋಡದ ಆಟ
ಮಲೆನಾಡು ಜಿಲ್ಲೆಗಳಲ್ಲೂ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ ತುಂತುರು ಮಳೆಯ ಸಾಧ್ಯತೆಯಿದ್ದರೆ, ಕೊಡಗು, ಹಾಸನದ ಸಕಲೇಶಪುರ ಹಾಗೂ ಚಿಕ್ಕಮಗಳೂರಿನಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಆದರೆ ಸೆಪ್ಟೆಂಬರ್ 29ರಿಂದ ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಮರುಕಳಿಸುವ ಮುನ್ಸೂಚನೆ ಇದೆ.
ಸೆಪ್ಟೆಂಬರ್ 30ರಿಂದ ಮಲೆನಾಡಿನ ಹಲವು ಪ್ರದೇಶಗಳಲ್ಲಿ ಮಳೆ ಚುರುಕಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಸಂಜೆ ವೇಳೆ ಮಳೆ
ಇನ್ನು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ನಿರೀಕ್ಷೆಯಿದೆ.
ಇನ್ನು ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸೆಪ್ಟೆಂಬರ್ 25ರಿಂದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಿದ್ದು, ಬಹುತೇಕ ಕಡೆ ಬಿಸಿಲಿನ ವಾತಾವರಣ ಕಂಡುಬರಲಿದೆ.
ಆದರೆ ಅಕ್ಟೋಬರ್ 1ರಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ.
MUST WATCH : ನಿಲುತ್ತಾ ಗೃಹಲಕ್ಷ್ಮಿ ಯೋಜನೆ – ಈ ಬಗ್ಗೆ ಸಿಎಂ ಬಿಗ್ ಅಪ್ಡೇಟ್..!




