ರಾಜ್ಯಸಭಾ ಚುನಾವಣೆ – ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ Mallikarjun Kharge

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿದ ಖರ್ಗೆ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ನಾಮಪತ್ರದ ದಾಖಲೆಗಳನ್ನು ಹಸ್ತಾಂತರಿಸಿದರು.

ಕಾಂಗ್ರೆಸ್ ನಾಯಕರ ಉಪಸ್ಥಿತಿ
ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು.
ಇದನ್ನು ಓದಿ : ‘ಆದಷ್ಟು ಬೇಗ…’ ಖರ್ಗೆಗೆ ಸಿದ್ದರಾಮಯ್ಯ ಮಾಡಿದ ಮನವಿ ಏನು?

ನಿಮ್ಮೆಲ್ಲರ ಬೆಂಬಲ ಅಗತ್ಯ
ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ನಮ್ಮ ಶಾಸಕರು ಹಾಗೂ ನಾಯಕರು ನನ್ನನ್ನು ಆಯ್ಕೆ ಮಾಡಿದ್ದಾರೆ. ಜೂನ್ 18ರಂದು ನಡೆಯುವ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ನಿಮ್ಮೆಲ್ಲರ ಬೆಂಬಲ ಅಗತ್ಯ,” ಎಂದು ಹೇಳಿದರು.
ಈ ವೇಳೆ ಮಾಧ್ಯಮಗಳು ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಕುರಿತಾಗಿ ಪ್ರಶ್ನೆ ಕೇಳಿದರೂ, ಖರ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.

ಇದನ್ನು ನೋಡಿ : ರಾಜ್ಯದಲ್ಲಿ CONGRESS ಸರ್ಕಾರ ಲಜ್ಜೆಗೆಟ್ಟಿದೆ -ಸರ್ಕಾರದ ವಿರುದ್ಧ VIJAYENDRA ಕಿಡಿ.!




