
TIPTUR ನಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಸಾವು!
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಮೃತರನ್ನು ತಾಲೂಕಿನ ಹೊನ್ನವಳ್ಳಿ ಗ್ರಾಮದ 35 ವರ್ಷದ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ.
READ THIS : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೃದ್ಧ ಸಾವು..! ಸಾವಿನ ಸುತ್ತ ಹಲವು ಅನುಮಾನಗಳ ಹುತ್ತ..!?

ಎರಡು ತುಂಡಾದ ದೇಹ!
ಹೌದು.. ತಿಪಟೂರಿನ ಹೊನ್ನವಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ರೈಲು ಹರಿದ ಪರಿಣಾಮ ಮೃತದೇಹ ಎರಡು ತುಂಡಾಗಿದೆ.

TIPTUR – ಸಾವಿಗೆ ನಿಖರ ಕಾರಣವೇನು?
ಇನ್ನು ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅರಸೀಕೆರೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ತಿಪಟೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇನ್ನು ನವೀನ್ ಸಾವಿಗೆ ನಿಖರ ಕಾರಣ ಕಾರಣವೇನೆಂಬುದು ತನಿಖೆಯ ಬಳಿಕ ತಿಳಿಯಬೇಕಿದೆ.

MUST WATCH : ರೀಲ್ಸ್ನಿಂದ ದೇಶ ನಡೆಸೋಕೆ ಆಗುತ್ತಾ – ಯಾಕಿಷ್ಟು ಭಯ ಪ್ರಧಾನಿ ಮೋದಿಗೆ




