Mandya : ಜೈಲಲ್ಲಿ ಇರಬೇಕಾದ ಖೈದಿ ಆಸ್ಪತ್ರೆಯಲ್ಲಿ ಗೆಳತಿ ಜೊತೆ ಪತ್ತೆ!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲಾ ಕಾರಾಗೃಹದಲ್ಲೂ ವಿಚಾರಣಾಧೀನ ಖೈದಿಗೆ ವಿಶೇಷ ಸೌಲಭ್ಯ ನೀಡಿದ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಅಧಿಕಾರಿಗಳ ದಿಢೀರ್ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಜೈಲಲ್ಲಿ ಇರಬೇಕಾದ ಖೈದಿ ಆಸ್ಪತ್ರೆಯಲ್ಲಿ ಗೆಳತಿ ಜೊತೆ ಪತ್ತೆ!
ಲೋಕಾಯುಕ್ತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಿಚಾರಣಾಧೀನ ಖೈದಿ ಮಹಮದ್ ಹುಸೇನ್, ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲದಿದ್ದರೂ ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಇದಲ್ಲದೆ, ಖೈದಿಯೊಂದಿಗೆ ಮಹಿಳೆಯೊಬ್ಬರು ಇದ್ದು, ಆಕೆ ಆತನ ಗೆಳತಿ ಎಂಬ ಮಾಹಿತಿ ವಿಚಾರಣೆ ವೇಳೆ ತಿಳಿದುಬಂದಿದೆ. ನ್ಯಾಯಾಲಯದ ಯಾವುದೇ ಅನುಮತಿ ಇಲ್ಲದೆ ವಿಶೇಷ ವಾರ್ಡ್ನಲ್ಲಿ ಖೈದಿಗೆ ಈ ಸೌಲಭ್ಯ ಕಲ್ಪಿಸಲಾಗಿತ್ತು ಎಂಬ ಆರೋಪವೂ ಕೇಳಿಬಂದಿದೆ.

ವಿಚಾರಣಾಧೀನ ಖೈದಿಗೆ ಹೈಫೈ ಟ್ರೀಟ್ ಮೆಂಟ್
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಕಚೇರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಜುಲೈ 2ರಂದು ದಾಳಿ ನಡೆಸಿದ್ದರು. ಸರ್ಕಾರಿ ತಂತ್ರಾಂಶದಲ್ಲಿ ಆಕಾರ್ಬಂಧ್, ದಾಖಲೆಗಳ ಡಿಜಿಟಲೀಕರಣ ಹಾಗೂ ನಕಲಿ ದಾಖಲೆಗಳ ಸೃಷ್ಟಿಗೆ ಸಹಕರಿಸಿದ ಆರೋಪ ಮಹಮದ್ ಹುಸೇನ್ ವಿರುದ್ಧ ಇದೆ. ಪ್ರಕರಣ ಸಂಬಂಧ ಜುಲೈ 3ರಂದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
READ THIS : Jailನಲ್ಲಿ ಖೈದಿಗಳಿಗೆ ನೀಡುತ್ತಿದ್ದ ವಿಶೇಷ ಸೌಲಭ್ಯಕ್ಕೆ ಬ್ರೇಕ್.!
ಗಂಭೀರ ಸಮಸ್ಯೆಯೂ ಇಲ್ಲ
ಜೈಲು ವೈದ್ಯಾಧಿಕಾರಿಯ ಸಲಹೆಯ ಮೇರೆಗೆ ಆರೋಪಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ನ್ಯಾಯಾಲಯಕ್ಕೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿ ಜೈಲು ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.

ಯಾವುದೇ ಆರೋಗ್ಯ ಸಮಸ್ಯೆ ಇಲ್ಲದಿದ್ದರು ಆಸ್ಪತ್ರೆಗೆ ದಾಖಲು
ಆದರೆ, ಆರೋಪಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ಮಿಮ್ಸ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಕುಮಾರ್ ಹೇಳಿದ್ದಾರೆ.
ಅಲ್ಲದೆ, ಆರೋಪಿಯನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನೂ ಅವರು ನೀಡಿದ್ದಾರೆ.
ಜೈಲು ವ್ಯವಸ್ಥೆಯಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ?
ನೆನ್ನೆ ಸಂಜೆ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ KSLSA ಮತ್ತು DLSA ಅಧಿಕಾರಿಗಳ ತಂಡ, ಖೈದಿಗೆ ನೀಡಲಾಗಿದ್ದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದೆ.
ಈ ವೇಳೆ ಜೈಲು ವ್ಯವಸ್ಥೆಯಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬ ಬಗ್ಗೆ ಹಲವು ಪ್ರಶ್ನೆಗಳು ಮೂಡಿವೆ.

ಇನ್ನು ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ DLSA ಅಧ್ಯಕ್ಷ ಚಂದ್ರಶೇಖರ ಸಿ., KSLSA ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಮಣಿ, ಸದಸ್ಯ ಡಾ. ಮೋಹನ್ ರಾವ್ ನಲ್ವಡೆ ಹಾಗೂ DLSA ಸದಸ್ಯ ಕಾರ್ಯದರ್ಶಿ ಆನಂದ್ ಎಂ. ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.
MUST WATCH : ಆರೋಗ್ಯ ಕೇಂದ್ರ ಸ್ಥಳಾಂತರಕ್ಕೆ ಚಿಂತನೆ – ತುಮಕೂರಿನ ಜನರಲ್ಲಿ ಹೆಚ್ಚಿದ ಆತಂಕ.!




