KPSC ಅಕ್ರಮ ಖಂಡಿಸಿ ಎಬಿವಿಪಿಯಿಂದ ವಿನೂತನ ಅಭಿಯಾನ

ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ವಿನೂತನ ಅಭಿಯಾನ ಕೈಗೊಂಡಿದ್ದಾರೆ.
ಹೌದು, ಕೆಪಿಎಸ್ಸಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎಬಿವಿಪಿ ತುಮಕೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು, ಸಾರ್ವಜನಿಕರು ಸಹಿಹಾಕುವ ಮೂಲಕ ಕೆಪಿಎಸ್ಸಿಯಲ್ಲಿ ಆಗಿರುವ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ರು.

ಇದನ್ನೂ ಓದಿ: ಸರ್ಕಾರಿ ಶಿಕ್ಷಕರಿಗೆ ಇನ್ಮುಂದೆ ಟಿಇಟಿ ಪರೀಕ್ಷೆ ಕಡ್ಡಾಯ..
ಇನ್ನು ಕೆಪಿಎಸ್ಸಿಯಲ್ಲಿ ಆಗಿರಯವ ಆಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಎಬಿವಿಪಿ ಆರೋಪಿಸಿದ್ರು. ಇನ್ನು ಈ ಪ್ರಕರಣದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಪ್ರತಿಕ್ರಿಯೆಯನ್ನೂ ಸಂಘಟನೆ ಖಂಡಿಸಿದ್ದು, ಸತ್ಯಾಸತ್ಯತೆ ಹೊರಬರಬೇಕಾದರೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದ್ರು.
ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

MUST WATCH : ಭೂತಪ್ಪನ ಗುಡಿಯಲ್ಲಿ ಕೋತಿ ಕಾಟ -15ಕ್ಕೂ ಹೆಚ್ಚು ಮಂದಿಗೆ ಕಚ್ಚಿದ ಕೋತಿ

