ಬೆಂಗಳೂರಿನ ಐಪಿಎಸ್ ಲೇಔಟ್ನಲ್ಲಿ Rave Party – ಮೂವರು ಅರೆಸ್ಟ್, ಮಹಿಳೆಯರ ರಕ್ಷಣೆ

ಬೆಂಗಳೂರು ನಗರದ ಐಪಿಎಸ್ ಲೇಔಟ್ನಲ್ಲಿ ಆಯೋಜಿಸಲಾಗಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಮಹಿಳಾ ಘಟಕ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ದೀಕ್ಷಿತ್, ವೇದಾಂತ್ ಪಂಡಿತ್ ಹಾಗೂ ಶಂಕರ್ ಎಂದು ಗುರುತಿಸಲಾಗಿದೆ.
ನಿಷೇಧಿತ ಹುಕ್ಕಾ, ಇ-ಸಿಗರೇಟ್ ಜಪ್ತಿ!
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಪಾರ್ಟಿ ಸ್ಥಳದಿಂದ ನಿಷೇಧಿತ ಹುಕ್ಕಾ, ಇ-ಸಿಗರೇಟ್ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಪಾರ್ಟಿಯಲ್ಲಿ ಇದ್ದ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನು ಓದಿ : ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ

ಏನಿದು ರೇವ್ ಪಾರ್ಟಿ ಪ್ರಕರಣ?
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ 6ನೇ ಸೆಕ್ಟರ್ನ ಐಪಿಎಸ್ ಲೇಔಟ್ನ ಸಿ-9 ವಿಲ್ಲಾವನ್ನು 20 ಸಾವಿರ ರೂಪಾಯಿ ಬಾಡಿಗೆಗೆ ಪಡೆದು ‘ರೇವ್ ಕೀ ಹಾಸ್ಪಿಟಾಲಿಟಿ ಸರ್ವಿಸ್’ ಹೆಸರಿನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ‘ಅಮಿಗೋಸ್’ ಆಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ ನೀಡಲಾಗಿದ್ದು, ಪುರುಷರಿಗೆ ₹1,099 ಹಾಗೂ ಮಹಿಳೆಯರಿಗೆ ₹499 ಪ್ರವೇಶ ಶುಲ್ಕ ನಿಗದಿಪಡಿಸಲಾಗಿತ್ತು. ಪಾರ್ಟಿಯಲ್ಲಿ ಭಾಗವಹಿಸಿದ್ದವರು ಇ-ಸಿಗರೇಟ್, ಹುಕ್ಕಾ ಹಾಗೂ ಮದ್ಯ ಸೇವಿಸಿ ಮೋಜು-ಮಸ್ತಿಯಲ್ಲಿ ತೊಡಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು
ದಾಳಿಯ ಬಳಿಕ ಪಾರ್ಟಿ ಆಯೋಜಕರಾದ ಮೂವರನ್ನು ಬಂಧಿಸಲಾಗಿದ್ದು, ವಿಲ್ಲಾ ಮಾಲೀಕರ ವಿರುದ್ಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಿಸಿಬಿ ಹಾಗೂ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ನಗರಸಭೆ ಕಚೇರಿಯ ವಸ್ತುಗಳು ಜಫ್ತಿ..! – ಪರಿಹಾರ ಕೊಡದಿದ್ದಕ್ಕೆ ಕೋರ್ಟ್ ಶಾಕ್



