Sira : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ – ಹಾಲನ್ನು ತುಂಬಿಸಿಕೊಳ್ಳಲು ಮುಗಿಬಿದ್ದ ಸಾರ್ವಜನಿಕರು

ಹಾಲು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅಪಾರ ಪ್ರಮಾಣದ ಹಾಲು ರಸ್ತೆಗೆ ಚೆಲ್ಲಿಹೋಗಿರುವ ಘಟನೆ ತುಮಕೂರು ಜಿಲ್ಲೆಯ Sira ಬೈಪಾಸ್ನಲ್ಲಿ ನಡೆದಿದೆ. ಸುಮಾರು 25 ಸಾವಿರ ಲೀಟರ್ ಹಾಲು ರಸ್ತೆಗೆ ಹರಿದುಹೋಗಿದ್ದು, ಜನರು ಹಾಲು ತುಂಬಿಕೊಳ್ಳಲು ಮುಗಿಬಿದ್ದಿದ್ರು.
READ THIS : Dharmasthala ಪ್ರಕರಣ ತನಿಖೆ ನಡೆಸುತ್ತಿದ್ದ ಎಸ್ಐಟಿ SP ಕಾರು ಪಲ್ಟಿ..!

ಹಾಲನ್ನು ತುಂಬಿಸಿಕೊಳ್ಳಲು ಮುಗಿಬಿದ್ದ ಜನ
ಹಾಲಿನ ಲಾರಿ ತುಮಕೂರು ಕಡೆಯಿಂದ ಮುಂಬೈಗೆ ತೆರಳಲು ಶಿರಾ ಬೈಪಾಸ್ನಲ್ಲಿ ಸಂಚರಿಸುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಸಾವಿರಾರು ಲೀಟರ್ ಹಾಲು ರಸ್ತೆಯುದ್ದಕ್ಕೂ ಕ್ಷೀರ ಸಾಗರದಂತೆ ಹರಿದಿದೆ. ಟ್ಯಾಂಕರ್ ಪಲ್ಟಿಯಾದ ವಿಷಯ ತಿಳಿದ ಕೆಲವರು ಕವರ್, ಪ್ಲಾಸ್ಟಿಕ್ ಬಾಟಲಿ ಹಾಗೂ ಕ್ಯಾನ್ಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಚೆಲ್ಲುತ್ತಿದ್ದ ಹಾಲನ್ನು ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Sira – 25 ಸಾವಿರ ಲೀಟರ್ ಹಾಲು ರಸ್ತೆ ಪಾಲು
ಇನ್ನು ಅಪಘಾತದ ಪರಿಣಾಮ ಅಂದಾಜು 8 ಲಕ್ಷ ರೂಪಾಯಿ ಮೌಲ್ಯದ ಸುಮಾರು 25 ಸಾವಿರ ಲೀಟರ್ ಹಾಲು ರಸ್ತೆ ಪಾಲಾಗಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
MUST WATCH : MEDICAL WASTE ವಿಲೇವಾರಿಯಲ್ಲಿ ಎಡವಟ್ಟು I ಆಸ್ಪತ್ರೆ ಆವರಣದಲ್ಲೇ ಬಿದ್ದಿದೆ ರಾಶಿ ತ್ಯಾಜ್ಯ




