ತಮಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಸಚಿವರ ಜವಾಬ್ದಾರಿ ನೀಡದಂತೆ CM ಗೆ ಜಮೀರ್ ಅಹಮ್ಮದ್ ಪತ್ರ

ವಿಜಯನಗರ ಜಿಲ್ಲೆ ಉಸ್ತುವಾರಿ ಜವಾಬ್ದಾರಿ ನೀಡದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಬೇಡಿ
ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಿದೆ. ಹೀಗಾಗಿ ವಿಜಯನಗರ ಮಾತ್ರವಲ್ಲ, ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಬೇಡಿ ಎಂದು ಜಮೀರ್ ಮನವಿ ಮಾಡಿದ್ದಾರೆ.
ಇದನ್ನು ಓದಿ : ನನಗೆ ಯಾವುದೇ ಮುನಿಸಿಲ್ಲ, ಯಾವುದೇ ಕಂಡೀಶನ್ ಹಾಕಿಲ್ಲ’ – ಸಚಿವ Zameer Ahmed Khan ಸ್ಪಷ್ಟನೆ..!!

CM ಗೆ ಪತ್ರ ಬರೆದ ಜಮೀರ್ – ಕಾರಣವೇನು?
ಇನ್ನು 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಮುಖ್ಯಮಂತ್ರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಆದರೆ ವಿಜಯನಗರದಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮಕ್ಕೂ ತಾವು ಭಾಗಿಯಾಗುವುದಿಲ್ಲ ಎಂದು ಪತ್ರದಲ್ಲಿ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಜಿಲ್ಲೆಯ ಉಸ್ತುವಾರಿ ನೀಡದಂತೆ ಮನವಿ
ಚುನಾವಣೆ ಹಾಗೂ ಪಕ್ಷ ಸಂಘಟನೆಯ ಜವಾಬ್ದಾರಿಗಳ ನಡುವೆ ಜಿಲ್ಲಾ ಉಸ್ತುವಾರಿ ಹೊಣೆ ನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಜಮೀರ್, ಯಾವುದೇ ಜಿಲ್ಲೆಯ ಉಸ್ತುವಾರಿ ನೀಡದಂತೆ ಸಿಎಂಗೆ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ಹರ್ ಘರ್ ತಿರಂಗಾಗೆ ಅದ್ಧೂರಿ ಚಾಲನೆ – ತ್ರಿವರ್ಣ ಧ್ವಜದೊಂದಿಗೆ ಬೈಕ್ ರ್ಯಾಲಿ




