Bengaluru : ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ ಬಹುತೇಕ ಫಿಕ್ಸ್!

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹುದ್ದೆಗೆ ಕಾಂಗ್ರೆಸ್ನ ಹಿರಿಯ ಸದಸ್ಯೆ ಹಾಗೂ ಖ್ಯಾತ ನಟಿ ಉಮಾಶ್ರೀ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟವು ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಉಮಾಶ್ರೀ ಅವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ನಾಳೆ ಸದನದಲ್ಲಿ ಅವರ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ನನಗೂ ಸಚಿವೆಯಾಗುವ ಆಸೆ ಇತ್ತು
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ, ರಾಜ್ಯ ಸಚಿವ ಸಂಪುಟದಲ್ಲಿ ಸಚಿವೆಯಾಗುವ ಆಕಾಂಕ್ಷೆ ತಮಗೂ ಇತ್ತು ಎಂದು ಹೇಳಿದ್ದಾರೆ. “ಸಹಜವಾಗಿ ನನಗೂ ಸಚಿವೆಯಾಗುವ ಆಸೆ ಇತ್ತು. ಆದರೆ ನಮ್ಮ ಕಾಂಗ್ರೆಸ್ ಪಕ್ಷ ಸಚಿವ ಸ್ಥಾನಕ್ಕಿಂತಲೂ ಅತ್ಯಂತ ಉನ್ನತವಾದ ಸಾಂವಿಧಾನಿಕ ಸ್ಥಾನವನ್ನು ಗೌರವದಿಂದ ನೀಡಿದೆ. ಈ ಜವಾಬ್ದಾರಿ ಸಿಕ್ಕಿರುವುದಕ್ಕೆ ನನಗೆ ಅತ್ಯಂತ ತೃಪ್ತಿಯಿದೆ” ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ : ವಿದ್ಯುತ್ ಖಾಸಗೀಕರಣಕ್ಕೆ Umashree ತೀವ್ರ ವಿರೋಧ..!!

ತಮಗೆ ಮಹತ್ವದ ಜವಾಬ್ದಾರಿ ನೀಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಅವರಿಗೆ ಉಮಾಶ್ರೀ ಧನ್ಯವಾದ ಹೇಳಿದ್ದಾರೆ. ‘ಪಕ್ಷ ಮತ್ತು ಸದನ ನನ್ನ ಮೇಲಿಟ್ಟಿರುವ ನಿರೀಕ್ಷೆಗೆ ತಕ್ಕಂತೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿಕೊಂಡು ಹೋಗುತ್ತೇನೆ’ ಎಂದು ತಿಳಿಸಿದರು.
ಉಪಸಭಾಪತಿ ಚುನಾವಣೆಯಿಂದ ಬಿಜೆಪಿ-ಜೆಡಿಎಸ್ ಹಿಂದೆ ಸರಿತ
ಮತ್ತೊಂದೆಡೆ, ಉಪಸಭಾಪತಿ ಚುನಾವಣೆಯಿಂದ ಹಿಂದೆ ಸರಿಯುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಜಾಣ ನಡೆ ಪ್ರದರ್ಶಿಸಿದೆ. ಇತ್ತೀಚೆಗಷ್ಟೇ ನಡೆದ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಸ್ಪರ್ಧಿಸಿ, ಸಂಖ್ಯಾಬಲದ ಕೊರತೆಯಿಂದಾಗಿ ಸೋಲು ಕಂಡಿದ್ದರು.

ಇದನ್ನು ನೋಡಿ : ಆಷಾಢಕ್ಕೆ ತವರಿಗೆ ಹೋದ ಪತ್ನಿ… ಕರೆದ್ರು ಬರ್ಲಿಲ್ಲ ಅಂತ ಗಂಡ ನೇ*ಗೆ ಶರಣು




