MLC Election : ರಂಗೇರಿದ ವಿಧಾನ ಪರಿಷತ್ ಚುನಾವಣೆ – ಅಡ್ಡ ಮತದಾನದ ಭೀತಿ!

MLC Election : ವಿಧಾನ ಪರಿಷತ್ನ 7 ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.

ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಬಿಜೆಪಿ ಬೆಂಬಲ
ಈ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಬಿ.ಎಸ್. ಶಿವಣ್ಣ, ಪಿ.ವಿ. ಮೋಹನ್ ಹಾಗೂ ವಿನಯ್ ಕಾರ್ತಿಕ್ ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿಗಳಾಗಿ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಕಣಕ್ಕಿಳಿದಿದ್ದು, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಬಿಜೆಪಿ ಬೆಂಬಲ ನೀಡಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಪೈಪೋಟಿ
ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ ಕಾಂಗ್ರೆಸ್ ನಾಲ್ಕು ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಆದರೆ ಉಳಿದ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ನ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಇದನ್ನು ಓದಿ : ವಿಧಾನ ಪರಿಷತ್ ಚುನಾವಣೆಗೆ ಕೌಂಟ್ ಡೌನ್

ಅಡ್ಡ ಮತದಾನದ ಭೀತಿ
ಈ ಹಿನ್ನೆಲೆಯಲ್ಲಿ ಅಡ್ಡ ಮತದಾನವೇ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಮೂರೂ ಪಕ್ಷಗಳು ತಮ್ಮ ಶಾಸಕರ ಮೇಲೆ ನಿಗಾ ವಹಿಸಿವೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಶಾಸಕರನ್ನು ರೆಸಾರ್ಟ್ಗಳಲ್ಲಿ ಇರಿಸಿದ್ದರೆ, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಗೆಲುವಿನ ತಂತ್ರ ರೂಪಿಸಿದೆ.

‘ಕೈ’ ಶಾಸಕರನ್ನ ಕರೆತರಲು 5 ಬಸ್ಗಳ ವ್ಯವಸ್ಥೆ
ಐದೂ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್ ವಿಶೇಷ ಕಾರ್ಯತಂತ್ರ ರೂಪಿಸಿದೆ. ರೆಸಾರ್ಟ್ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ಅಭ್ಯರ್ಥಿಗಳ ಪ್ರಕಾರ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಶಾಸಕರಿಗೂ ಮತದಾನ ಹೇಗೆ ಮಾಡಬೇಕು ಎಂದು ತರಬೇತಿ
ಯಾವ ಶಾಸಕರು ಯಾವ ಅಭ್ಯರ್ಥಿಗೆ ಮತ ಹಾಕಬೇಕು ಎಂಬುದನ್ನು ಈಗಾಗಲೇ ಪಕ್ಷ ನಿರ್ಧರಿಸಿದ್ದು, ಅದಕ್ಕೆ ಅನುಗುಣವಾಗಿ ಪ್ರತ್ಯೇಕ ತಂಡಗಳಾಗಿ ಶಾಸಕರು ಪ್ರಯಾಣಿಸಲಿದ್ದಾರೆ.
ಅಡ್ಡ ಮತದಾನ ನಡೆದರೆ ಅದನ್ನು ಸುಲಭವಾಗಿ ಪತ್ತೆಹಚ್ಚಲು ಈ ವ್ಯವಸ್ಥೆ ನೆರವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬುಧವಾರ ರೆಸಾರ್ಟ್ನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಎದುರಿನಲ್ಲೇ ಅಣಕು ಮತದಾನ ನಡೆಸಿ, ಎಲ್ಲಾ ಶಾಸಕರಿಗೂ ಮತದಾನ ಹೇಗೆ ಮಾಡಬೇಕು ಎಂದು ತರಬೇತಿ ನೀಡಲಾಗಿದೆ.

ಇದನ್ನು ನೋಡಿ : ಇಂದು ವಿಧಾನಪರಿಷತ್ ಚುನಾವಣೆ ವಿಧಾನಸೌಧ ಸುತ್ತಮುತ್ತಾ 144 ಸೆಕ್ಷನ್ ಜಾರಿ




